ಕೊರೋನಾ ಸೊಂಕು: ಸಾರ್ವಜನಿಕ ಸೇವೆಗಳು ಸ್ಥಗಿತ

Share on facebook
Share on twitter
Share on linkedin
Share on whatsapp
Share on email

ಬೆಳಗಾಯಿತು ವಾರ್ತೆ
ಬಳ್ಳಾರಿ:
ಕೋವಿಡ್-19 (ಕರೋನಾ ವೈರಾಣು ಕಾಯಿಲೆ-2019)ಯ ಸ್ಪೋಟ ಮತ್ತು ಹರಡುವುದನ್ನು ತಡೆಗಟ್ಟುವ ಸಂಬಂಧ ಸರ್ಕಾರಿ ಮತ್ತು ಸಾರ್ವಜನಿಕ ಕಛೇರಿಗಳಲ್ಲಿ ಸಾರ್ವಜನಿಕರ ಹಾಜರಾತಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಕೆಲವು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಸರ್ಕಾರದ ವಿವಿಧ ಸೇವೆಗಳನ್ನು ಪಡೆಯುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಂಬಂಧಿಸಿದ ಕಛೇರಿಗಳಿಗೆ ಭೇಟಿ ನೀಡುವುದು, ಸಾರ್ವಜನಿಕರು ಏಕ ಕಾಲದಲ್ಲಿ ಒಟ್ಟಿಗೆ ಸೇರುವಂತಹ ಸಂದರ್ಭ ಉಂಟಾಗಿ ವೈರಾಣು ಹರಡಲು ಅನುಕೂಲ ವಾತಾವರಣ ಮಾಡಿಕೊಟ್ಟಂತಾಗುವುದರಿಂದ ಇದನ್ನು ತಪ್ಪಿಸಲು ಹಾಗೂ ವೈರಾಣು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದನ್ನು ತಡಗಟ್ಟುವ ಉದ್ದೇಶದಿಂದ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರವರ ಕಛೇರಿಗಳಿಗೆ (ಸಹಕಾರ ಇಲಾಖೆಗೆ ಸಂಬಂಧಿಸಿದಂತೆ) ಸಂಬಂಧಿಸಿದಂತೆ ನೀಡಲಾಗುವ ಸೇವೆಗಳನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶ ನೀಡಲಾಗಿದೆ.

ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳು, ಇವರ ಆದೇಶದ ಮೇರೆಗೆ ಕೊರೋನಾ ವೈರಾಣು (ಅಔಗಿIಆ-19) ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಅಂದರೆ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರವರ ಕಛೇರಿಗಳಿಂದ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಹಾಗೂ ಸಿಬ್ಬಂದಿಯ ಹಿತದೃಷ್ಠಿಯಿಂದ ಸಾರ್ವಜನಿಕರು ಸಹಕರಿಸಲು ಈ ಮೂಲಕ ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter