ಕೊರೊನಾದಿಂದ ಗೌರಿಬಿದನೂರು ವೃದ್ಧೆ ಸಾವು

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೃದ್ಧೆಯು ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೃದ್ಧೆಯ ಸಾವಿನಿಂದ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ರಾಜ್ಯದಲ್‍ಲಿ ಎರಡಕ್ಕೆ ಏರಿದೆ ಎಂದರು.

ರಾಜ್ಯದಲ್ಲಿ 52 ಮಂದಿಗೆ ಕೊರೊನಾ ಸೋಂಕಿದೆ. 214 ಮಂದಿಯನ್ನು ಪ್ರತ್ಯೇಕ ವಾರ್ಡ್ ನಲ್ಲಿರಿಸಿ ಚಿಕಿತ್ಸೆನೀಡಲಾಗುತ್ತದೆ. ಇದುವರೆಗೆ 1.30 ಲಕ್ಷ ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 2500 ಮಂದಿಯ ಗಂಟಲು ದ್ರವವನ್ನು ಸಂಗ್ರಹಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರಧಾನ ಮಂತ್ರಿ ಮೋದಿರವರು ದೇಶದ ಜನರ ಒಳಿತಿಗಾಗಿ 21 ದಿನಗಳ ಲಾಕ್ಡೌನ್ ಘೋಷಿಸಿದ್ದಾರೆ. ಜನ ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter