ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ರೂ ನಿಗದಿ, ಶೀಘ್ರದಲ್ಲೇ ನೂತನ ಶಿಕ್ಷಣ ನೀತಿ

ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ರೂ ನಿಗದಿ, ಶೀಘ್ರದಲ್ಲೇ ನೂತನ ಶಿಕ್ಷಣ ನೀತಿ


ನವದೆಹಲಿ,: ಕೇಂದ್ರ ಆಯವ್ಯಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ರೂ ನಿಗದಿಪಡಿಸಿದ್ದು, ಶೀಘ್ರದಲ್ಲೇ ನೂತನ ಶಿಕ್ಷಣ ನೀತಿ ಪ್ರಕಟಿಸುವುದಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಲೋಕಸಭೆಯಲ್ಲಿಂದು 2020-12 ನೇ ಸಾಲಿನ ಬಜೆಟ್ ಮಂಡಿಸಿದ ಅವರು, ನೂತನ ಶಿಕ್ಷಣ ನೀತಿ ಜಾರಿಗೆ ತರುವ ಸಂಬಂಧ ದೇಶಾದ್ಯಂತ ಒಟ್ಟಾರೆ ಎರಡು ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಪಡೆಯಲಾಗಿದ್ದು, ಇದರ ಆಧಾರದ ಮೇಲೆ ನೂತನ ನೀತಿ ಜಾರಿಗೆ ರೂಪಿಸಿ ತರಲಾಗುತ್ತಿದೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಬೋಧಕ ಸಿಬ್ಬಂದಿಯನ್ನು ಆಕರ್ಷಿಸುವ ಅಗತ್ಯವಿದ್ದು, ಇದಕ್ಕಾಗಿ ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸುವ ಮತ್ತು ಬಾಹ್ಯ ವಾಣಿಜ್ಯ ಸಾಲ ಸೌಲಭ್ಯಗಳಿಗೆ ಅನುವು ಮಾಡಿಕೊಡುವ ವ್ಯವಸ್ಥೆ ರೂಪಿಸಲಾಗುವುದು ಎಂದು ಹೇಳಿದರು.

ಬರುವ 2026ರ ವೇಳೇಗೆ ದೇಶದ 150 ವಿಶ್ವವಿದ್ಯಾಲಯಗಳಲ್ಲಿ ಹೊಸ ಕೋರ್ಸ್ ಗಳನ್ನು ಆರಂಭಿಸಲಾಗುವುದು. ಭಾರತದಲ್ಲಿ ಅಧ್ಯಯನ ಮಾಡುವ ಕಾರ್ಯಕ್ರಮದಡಿ ಐ.ಎನ್.ಡಿ – ಎಸ್.ಎ.ಟಿ ಪರೀಕ್ಷೆಯನ್ನು ಏಷ್ಯಾ ಮತ್ತು ಆಫ್ರಿಕಾ ದೇಶಗಳ ವಿದ್ಯಾರ್ಥಿಗಳು ಅಧ್ಯಯನಮಾಡಿದರೆ ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದರು.

” ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕು ಎನ್ನುವ ಪರಿಕಲ್ಪನೆಯಡಿ ಆನ್ ಲೈನ್ ಶಿಕ್ಷಣಕ್ಕೂ ಒತ್ತು ನೀಡಲಾಗುತ್ತಿದೆ. ಮೊದಲ ನೂರು ಸ್ಥಾನದಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಹಂತದ ಕೋರ್ಸ್ ಗಳನ್ನು ಪೂರ್ಣ ಪ್ರಮಾಣದಲ್ಲಿ ಅರಂಭಿಸಲಾಗುವುದು ” ಎಂದರು.

ಕೌಶಲ್ಯ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ ನಿಗದಿ ಮಾಡಿದ್ದು, ಕೌಶಲ್ಯ ಶಿಕ್ಷಣಕ್ಕೂ ಒತ್ತು ಕೊಡುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.