ದೇಶಾದ್ಯಂತ ಅನ್ ಲಾಕ್ – 3 ಜಾರಿ: ರಾತ್ರಿ ಕರ್ಫ್ಯೂ ಇಲ್ಲ

Share on facebook
Share on twitter
Share on linkedin
Share on whatsapp
Share on email

ನವದೆಹಲಿ: ದೇಶಾದ್ಯಂತ ಇಂದಿನಿಂದ ದೇಶಾದ್ಯಂತ ಅನ್‌ಲಾಕ್-೩ ಜಾರಿಗೆ ಬಂದಿದ್ದು. ಕಂಟೈನ್‌ಮೆಂಟ್ ವಲಯ ಹೊರತುಪಡಿಸಿ ಉಳಿದೆಡೆ ಮತ್ತಷ್ಟು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಹಲವು ನಿರ್ಬಂಧಗಳನ್ನು ತೆರವು ಮಾಡಲಾಗಿದ್ದು, ಇಂದಿನಿಂದ ರಾತ್ರಿ ಕರ್ಫ್ಯೂ ಇರುವುದಿಲ್ಲ.

ಆಗಸ್ಟ್ ೫ರಿಂದ ಯೋಗ ತರಬೇತಿ ಮತ್ತು ಜಿಮ್‌ಗಳು ಅರಂಭಿಸಲು ಅನುಮತಿ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನಿಯಮಗಳ ಅನ್ವಯ ಸುರಕ್ಷಿತ ಕ್ರಮಗಳನ್ನು ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜತೆ ಸಮಗ್ರ ಮಾತುಕತೆ ನಂತರ ಕೇಂದ್ರ ಗೃಹ ಸಚಿವಾಲಯ ಈ ಆದೇಶ ಜಾರಿ ಮಾಡಿದೆ. ಕೇಂದ್ರದ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ಕೂಡ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಶಾಲಾ ಕಾಲೇಜು ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಆಗಸ್ಟ್ ೩೧ರವರೆಗೆ ತೆರೆಯದಂತೆ ಮಾರ್ಗಸೂಚಿಯಲ್ಲಿ ನಿರ್ಬಂಧ ಹೇರಲಾಗಿದೆ.

ಸುರಕ್ಷಿತ ಕ್ರಮಗಳೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ರಾಜ್ಯ, ಜಿಲ್ಲಾ, ಉಪ ವಿಭಾಗ, ಪಂಚಾಯತ್ ಮಟ್ಟದಲ್ಲಿ ಆಚರಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ನಿರ್ಬಂಧಿಸಲಾಗಿದೆ. ಆಚರಣೆಯ ವೇಳೆ ವ್ಯಕ್ತಿಗತ ಅಂತರ ಮತ್ತು ಇತರ ನಿಯಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಆಗಸ್ಟ್ ೩೧ರವರೆಗೆ ಕಂಟೇನ್ಮೆಂಟ್ ವಲಯಗಳಲ್ಲಿ ಲಾಕ್‌ಡೌನ್ ಮುಂದುವರಿಯಲಿದೆ. ಈ ವಲಯಗಳಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

ಆಯಾ ರಾಜ್ಯ ಸರ್ಕಾರಗಳು ಮತ್ತು ಜಿಲ್ಲಾಡಳಿತಗಳು ಪರಿಸ್ಥಿತಿಗೆ ತಕ್ಕಂತೆ ಲಾಕ್ ಡೌನ್ ಮತ್ತಿತರ ನಿರ್ಬಂಧಗಳನ್ನು ಹೇರಬಹುದಾಗಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter