ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಕಮಲ್ ಪಂತ್ ಅವರು ಶನಿವಾರ ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಬೆಳಗ್ಗೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ, ಮಹಿಳಾ ಡಿಸಿಪಿ, ಎಸಿಪಿಗಳ ಮನವಿ ಮೇರೆಗೆ ಫೋಟೋಶೂಟ್ ನಲ್ಲಿ ಪಾಲ್ಗೊಂಡರು.
ಕೆಎಸ್ಆರ್ಪಿ ತುಕಡಿ ವಾದ್ಯ ತಂಡದಿಂದ ಕಮಲ್ ಪಂತ್ ಗೌರವ ರಕ್ಷೆ ಸ್ವೀಕರಿಸಿದರು. ಬಳಿಕ ಭಾಸ್ಕರ್ ರಾವ್ ಬ್ಯಾಟನ್ ಬದಲಾಯಿಸಿಕೊಳ್ಳುವ ಮೂಲಕ ಕಮಲ್ ಪಂತ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ವೇಳೆ ನಿರ್ಗಮಿತ ಆಯುಕ್ತ ಭಾಸ್ಕರ್ ರಾವ್ ಅವರು ಭಾವುಕರಾಗಿ ಕಣ್ಣೀರು ಹಾಕಿದ ಘಟನೆಯೂ ಜರುಗಿತು.
ಚೇಂಬರ್ ಗೆ ಕೈ ಮುಗಿದು, ಬೆಂಗಳೂರು ಜನತೆಯ ಸಹಕಾರ ನೆನೆದು ನಮಸ್ಕರಿಸಿ ನಿರ್ಗಮಿಸಿದರು. ಬಳಿಕ ಟ್ವೀಟ್ ಮಾಡಿದ ಭಾಸ್ಕರ್ ರಾವ್. ಜನತೆ ಸೂಕ್ತ ರೀತಿಯಲ್ಲಿ ಸಹಕಾರ ನೀಡಿದ್ದಾರೆ. ಅವರ ಸಹಕಾರಕ್ಕೆ ಅಭಾರಿಯಾಗಿರುವುದಾಗಿ ಹೇಳಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ ಪಂತ್, ಈ ಹಿಂದೆ ಆಯುಕ್ತರ ಹುದ್ದೆ ನಿರ್ವಹಿಸಿದ ಹಿರಿಯ ಅಧಿಕಾರಿಗಳಂತೆ ನಾನು ಕೂಡ ಸರ್ಕಾರ ನೀಡಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುವುದಾಗಿ ಹೇಳಿದರು.
ಕೋವಿಡ್-19ನಿಂದ ಮೃತಪಟ್ಟ ಪೊಲೀಸ್ ಇಲಾಖೆ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ನೂತನ ಆಯುಕ್ತರು, ಕೊರೊನಾ ಜೊತೆ ಕಾನೂನು ಸುವ್ಯವಸ್ಥೆ ಕಾಪಾಡುವುದು ತಮ್ಮ ಮೊದಲ ಕರ್ತವ್ಯ. ಆದರೆ, ಎಂತಹ ಪರಿಸ್ಥಿತಿ ಇದ್ದರೂ ಮೊದಲ ಆದ್ಯತೆ ಕೋವಿಡ್ ವಿರುದ್ಧದ ಹೋರಾಟಕ್ಕೆ ಎಂದು ಅವರು ಸ್ಪಷ್ಟಪಡಿಸಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter