ಚೈನಾ ಪ್ರವಾಸ ರದ್ದು

ಚೈನಾ ಪ್ರವಾಸ ರದ್ದು

ಚೈನಾ ಪ್ರವಾಸ ರದ್ದು

ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಭಾಗದ ಕೊಲ್ಲಾಪೂರ ಮತ್ತು ಸಾಂಗಲಿ, ಮೀರಜ್, ಇಚಲಕರಂಜಿ ಮೊದಲಾದ ನಗರ ಪ್ರದೇಶದ ಕೈಗಾರಿಕೋದ್ಯಮಿಗಳು ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆಸಕ್ತಿ ತೋರಿದ್ದು, ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಲಿವೆ ಎಂದು ಬಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಘೋಷಿಸಿರುವ ಬೆಂಗಳೂರು – ಮುಂಬಯಿ ಕೈಗಾರಿಕಾ ಕಾರಿಡಾರ್ ಅನುಷ್ಠಾನದಿಂದ ಗಡಿಭಾಗದ ಕೈಗಾರಿಕೋದ್ಯಮದ ಅಭಿವೃದ್ಧಿಗೆ ಇನ್ನಷ್ಟು ಉತ್ತೇಜನ ದೊರೆಯಲಿದೆ. ನೂತನ ಕೈಗಾರಿಕಾ ನೀತಿ ಪ್ರಕಾರ ಹೆಚ್ಚಿನ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ಎರಡನೇ ಹಂತದ ನಗರಗಳಲ್ಲಿ ಕೈಗಾರಿಕಾ ನೀತಿಯನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ತರಲು ಆದ್ಯತೆ ನೀಡಲಾಗುವುದು ಎಂದರು.

ಚೈನಾ ದೇಶದ ಕೈಗಾರಿಕೋದ್ಯಮಿಗಳು ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಬಂಡವಾಳ ಹೂಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕರ್ನಾಟಕಕ್ಕೆ ಭೇಟಿ ನೀಡಿದ್ದ ಚೈನಾ ದೇಶದ ಉದ್ಯಮಿಗಳು, ಚೈನಾದಲ್ಲಿನ ಕೈಗಾರಿಕಾ ಬೆಳವಣಿಗೆ ಗಮನಿಸಲು ತಮ್ಮನ್ನು ತಮ್ಮ ದೇಶಕ್ಕೆ ಆಹ್ವಾನಿಸಿದ್ದರು. ಅಲ್ಲಿ ನಡೆಯಲಿರುವ ನಡೆಯುತ್ತಿರುವ ಕೈಗಾರಿಕಾರಿಕೋದ್ಯಮಿಗಳ ಮಹಾ ಸಮ್ಮೇಳನದಲ್ಲಿ ಭಾಗವಹಿಸಿಲು ಉದ್ದೇಶಿಸಿದ್ದೆ. ಆದರೆ, ನೆರೆಹಾವಳಿ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕೊಂಡಿರುವ ಕಾರಣ ಚೈನಾ ಪ್ರವಾಸ ರದ್ದುಗೊಳಿಸಿರುವುದಾಗಿ ಸಚಿವ ಶೆಟ್ಟರ್ ತಿಳಿಸಿದರು.

ಸರೋಜನಿ ಮಹಿಷಿ ವರದಿ ಅನುಷ್ಠಾನದ ಬಗ್ಗೆ ಗುರುವಾರ ನಡೆದ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದ್ದು, ಈ ವರದಿಯ ಹಿನ್ನೆಲೆಯಲ್ಲಿ ಖಾಸಗಿ ವಲಯದ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ವರ್ಗದ ಹುದ್ದೆಗಳನ್ನು ಭರ್ತಿ ಮಾಡುವಾಗ ಸ್ಥಳೀಯ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬುದು ಸರ್ಕಾರದ ನೀತಿಯಾಗಿತ್ತು. ಈ ಸಂಬಂಧ ಆದೇಶ ಹೊರಡಿಸುವ ಐತಿಹಾಸಿಕ ನಿರ್ಣಯಕೈಗೊಳ್ಳಲಾಗಿದೆ. ತಾವು ಭೇಟಿ ಕೊಡುತ್ತಿರುವ ಕೈಗಾರಿಕೆಗಳಲ್ಲಿ ಸರ್ಕಾರದ ಈ ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಸೂಚಿಸುತ್ತಿರುವುದಾಗಿ ತಿಳಿಸಿದರು.

ಹೈದ್ರಾಬಾದ್ ಕರ್ನಾಟಕ ಎಂಬುದು ಕಲ್ಯಾಣ ಕರ್ನಾಟಕ ಆದಂತೆ, ಮುಂಬಯಿ ಕರ್ನಾಟಕವನ್ನು ಆಡುಮಾತಿನಲ್ಲಿ ಕಿತ್ತೂರು ಕರ್ನಾಟಕ ಎಂದು ಅನುಷ್ಠಾನಗೊಳಿಸುತ್ತ ಹೋದರೆ ಮುಂದೆ ಅದು ಕಿತ್ತೂರು ಕರ್ನಾಟಕ ಆಗಲಿದೆ ಎಂದರು.
ಶಾಸಕರ ಅನರ್ಹತೆ ವಿಷಯದ ಕುರಿತು ಸುಪ್ರೀಂಕೋರ್ಟ್ ತೀರ್ಪು ಇದೇ ದಿನಾಂಕ 4 ಅಥವಾ 5ರಂದು ಪ್ರಕಟಗೊಳುವ ಸಾಧ್ಯತೆಯಿದ್ದು, ತೀರ್ಪು ಬಂದನಂತರ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಟಿಪ್ಪು ಕೊಡಗಿನ ಜನತೆ ಹಾಗೂ ಹಿಂದೂಗಳ ಮೇಲೆ ನಡೆಸಿದ ಪೈಶಾಚಿಕ ಕೃತ್ಯದಿಂದಾಗಿ ಬಿಜೆಪಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದೆ ಎಂದು ಸ್ಪಷ್ಟಪಡಿಸಿದರು.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.