ರಾಜ್ಯದಲ್ಲಿ ಮೊದಲ‌ ಭಾರಿಗೆ ಹುಬ್ಬಳ್ಳಿಯಲ್ಲಿ ಯಶ್ವಸಿಯಾದ ಪ್ಲಾಸ್ಮಾ ಥೆರಪಿ ಚಿಕಿತ್ಸೆ

Share on facebook
Share on twitter
Share on linkedin
Share on whatsapp
Share on email

ಹುಬ್ಬಳ್ಳಿ:ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಈಗ ಮತ್ತೊಂದು ಚಿಕಿತ್ಸೆಯನ್ನು ಯಶಸ್ವಿಗೊಳಿಸಿದೆ.ಸೋಂಕಿತರನ್ನು ಗುಣಮುಖಗೊಳಿಸುವ ವಿನೂತನ ಚಿಕಿತ್ಸೆಯನ್ನು ಯಶಸ್ವಿಯಾಗಿಸುವತ್ತ ದಾಪುಗಾಲು ಹಾಕಿದೆ.

ಕೊವೀಡ್ ಸೊಂಕಿತರನ್ನು ಗುಣಮುಖರನ್ನಾಗಿ ಮಾಡಲು ಪಾಸ್ಮಾ ಥೆರಪಿ ಚಿಕಿತ್ಸೆ ಪ್ರಯೋಗ ಮಾಡಲಾಗಿತ್ತು.‌ಆದರೆ ಹಲವೆಡೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ವಿಫಲವಾದ ನಂತರ ಇದೀಗ ರಾಜ್ಯದಲ್ಲಿ ಮೊದಲ‌ ಭಾರಿಗೆ ಹುಬ್ಬಳ್ಳಿಯಲ್ಲಿ ಪಾಸ್ಮಾ ಥೆರಪಿ ಚಿಕಿತ್ಸೆ ಯಶ್ವಸಿಯಾಗಿದೆ. 

ಹುಬ್ಬಳ್ಳಿಯ ಕೋವಿಡ ಸೊಂಕಿತ ಪಿ-363 ರಿಂದ ಪ್ಲಾಸ್ಮಾ ಡೋನೇಟ್ ಪಡೆದು ಮುಂಬೈನಿಂದ ರಾಜ್ಯಕ್ಕೆ ವಾಪಸ್ ಆಗಿದ್ದ ಪಿ-2710 ಪ್ಲಾಸ್ಮಾ ಥೆರಪಿ ಮಾಡಿ ವೈದ್ಯರ ತಂಡ ಯಶಸ್ಸು ಸಾಧಿಸಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಈ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪಾಸ್ಮಾ ಥೆರಪಿ ಚಿಕಿತ್ಸೆ ಯಶ್ವಸಿಗೊಳಿಸಿದೆ.
ಕಿಮ್ಸ್ ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ನೀಡಲು ಐಸಿಎಂಆರ್‌ ನಿಂದ ಅನುಮತಿ ನೀಡಿದ್ದು,ರಾಜ್ಯದಲ್ಲಿ ಹುಬ್ಬಳ್ಳಿಯ  ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಮಾತ್ರ ಅನುಮತಿ ನೀಡಲಾಗಿದ್ದು, ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕಿಮ್ಸ್ ವೈದ್ಯರು ಸಿದ್ದತೆ  ಮಾಡಿಕೊಂಡಿದ್ದರು. ಆದರೆ ಕೊವಿಡ್ ಸೋಂಕಿನಿಂದ ಗುಣಮುಖರಾದ ರೋಗಿಗಳು ಬ್ಲಡ್ ನೀಡಲು ಮೊದಲಿಗೆ ಹಿಂದೇಟು ಹಾಕುತ್ತಿದ್ದರು. ಆದರೇ ಕಿಮ್ಸ್ ಆಡಳಿತ ಮಂಡಳಿ ಗುಣಮುಖರಾದವರನ್ನು ಮನವೊಲಿಸಿ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡಿರುವುದು ವಿಶೇಷವಾಗಿದೆ.

ಹಲವಾರು ಸವಾಲುಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ರಾಜ್ಯದಲ್ಲಿಯೇ ಮೊದಲ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲಿಗಲ್ಲನ್ನು ಸೃಷಿಸಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter