ಭಾನುವಾರದ ಲಾಕ್‌ಡೌನ್ ತೆರವು

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಅನ್‌ಲೌಕ್‌-3 ಮಾರ್ಗಸೂಚಿ ನಿನ್ನೆಯಿಂದ ಜಾರಿಗೆ ಬಂದಿದ್ದು, ಮಾರ್ಗಸೂಚಿಯಲ್ಲಿ ಸೂಚಿಸಿದ್ದಂತೆ ಭಾನುವಾರದ ಲಾಕ್‌ಡೌನ್‌ ಹಿಂಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಇಂದು ವಾಹನ ಸಂಚಾರ ಹಾಗೂ ಜನಜೀವನ ಎಂದಿನಂತಿದೆ. ಕಳೆದ ಎರಡು ತಿಂಗಳುಗಳ ಭಾನುವಾರಗಳಂದು ಲಾಕ್‌ಡೌನ್ ಇದ್ದುದರಿಂದ ಜನರು ಮನೆಯಿಂದ ಹೊರಗಡೆ ಬಂದಿರಲಿಲ್ಲ. ಆದರೆ ಈ ಭಾನುವಾರ ಎಲ್ಲಾ ಚಟುವಟಿಕೆಗಳು ಆರಂಭಗೊಂಡಿವೆ.

ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಹೊರಗೆ ಆಟೋ ಹಾಗೂ ಕ್ಯಾಬ್‌ ಸಂಚಾರ ಎಂದಿನಂತಿದ್ದು, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಎಂದಿನಂತೆ ಸಂಚರಿಸುತ್ತಿದೆ. ಆದರೆ ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ. ಭಾನುವಾರ ರಜಾ ದಿನವಾಗಿರುವುದರಿಂದ ಸರ್ಕಾರಿ ಕಚೇರಿ, ಖಾಸಗಿ ಕಚೇರಿಗಳು ಬಂದ್ ಆಗಿರುವುದರಿಂದ ಜನಸಂಚಾರವೂ ವಿರಳವಾಗಿದೆ. ಆದರೆ ದ್ವಿಚಕ್ರ ವಾಹನ ಸವಾರರು ಮಾತ್ರ ಯಾವುದೇ ಆತಂಕ ಇಲ್ಲದೆ ಎಂದಿನಂತೆ ಸಂಚರಿಸುತ್ತಿರುವುದು ಕಂಡುಬಂತು.


ಅನ್‌ಲಾಕ್ -3ರಲ್ಲಿ ಭಾನುವಾರದ ಲಾಕ್‌ಡೌನ್‌ ಮತ್ತು ರಾತ್ರಿ ಕರ್ಫ್ಯೂ ಹಿಂಪಡೆದಿರುವುದಾಗಿ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿತ್ತು. ಆಗಸ್ಟ್ 5ರಿಂದ ಜಿಮ್ ಮತ್ತು ಯೋಗ ಸಂಸ್ಥೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಮಾತ್ರವಲ್ಲ ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಉಳಿದೆಲ್ಲಾ ಪ್ರದೇಶಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸ್ವಾತಂತ್ರ್ಯ ದಿನಾಚರನೆಯನ್ನು ಆಚರಿಸಲು ಅವಕಾಶ ಕಲ್ಪಿಸಲಾಗಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter