ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್‌ಗೆ ಚಿಂತನೆ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಿಂದ ಲ್ಯಾಪ್‌ಟಾಪ್ ಪಡೆದಿರುವ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್‌ ಸೇವೆ ಒದಗಿಸುವ ಸಂಬಂಧ ಈ ಸೇವೆ ಒದಗಿಸುವ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ನಗರದಲ್ಲಿ ಮಂಗಳವಾರ ಇಂಟರ್‌ನೆಟ್‌ ಪೂರೈಕೆದಾರ ಸಂಸ್ಥೆಗಳ ಪ್ರತಿನಿಧಿಗಳ ಜತೆ ವಿಡಿಯೊ ಸಂವಾದ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
“ಲ್ಯಾಪ್‌ಟಾಪ್‌ ಕೊಟ್ಟ ನಂತರ ಅವುಗಳ ಸದುಪಯೋಗ ಸರಿಯಾಗಿ ಆಗುತ್ತಿಲ್ಲ. ಈ ಕಾರಣಕ್ಕೆ ಇಂಟರ್‌ನೆಟ್‌ ಸೇವೆ ಒದಗಿಸುವಂತೆ ಕೋರಲಾಗಿದೆ. ಇದಕ್ಕೆ ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಮಾಹಿತಿ ಒದಗಿಸುವಂತೆ ಕೋರಿವೆ. ಇದರ ನಡುವೆ ಆನ್‌ಲೈನ್‌ ಕಂಟೆಂಟ್‌ ಕೂಡ ಒದಗಿಸುವ ಕೆಲಸ ಇಲಾಖೆಯಿಂದ ಆಗುತ್ತಿದೆ” ಎಂದು ವಿವರಿಸಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter