ಜುಲೈ 1ರಿಂದ ಶಾಲೆ ತೆರೆಯುವ ಕುರಿತು ಪೋಷಕರ ಅಬಿಪ್ರಾಯ ಸಂಗ್ರಹಣೆ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಿಂದ ಜುಲೈ 1ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದಾರೆ.
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಅನುಸಾರ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ಆರಂಭಿಸಲು ಇಲಾಖೆ ಚಿಂತನೆ ನಡೆಸಿದೆ. ಈ ಸಂಬಂಧ ಜೂ5ರಿಂದಲೇ ರಾಜ್ಯದ ಎಲ್ಲ ಸರ್ಕಾರಿ‌ ಶಾಲೆಗಳು ಅಲ್ಲಿನ ಕಚೇರಿ ಸಿಬ್ಬಂದಿ ಸಂಬಂಧಿಸಿದ ಶಾಲೆಗಳಲ್ಲಿ ಕರ್ತವ್ಯಕ್ಕೆ‌ ಹಾಜರಾಗಿ, ಜೂ 8ರಿಂದ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸುತ್ತೋಲೆ ಸೂಚಿಸಿದೆ.
ಖಾಸಗಿ ಅನುದಾನರಹಿತ ಶಾಲಾ ಕಚೇರಿಗಳ ಪ್ರಾರಂಭಕ್ಕೂ ಅನುಮತಿಸಿ ಆದೇಶ ಹೊರಡಿಸಲಾಗಿದ್ದು, ಪೋಷಕರ‌ ಅಭಿಪ್ರಾಯವನ್ನು ಸಂಗ್ರಹಿಸಿ ಸಲ್ಲಿಸುವಂತೆ ಸುತ್ತೋಲೆ ಆದೇಶ ನೀಡಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter