ಪ್ರೇಕ್ಷಕರನ್ನು ರಂಜಿಸಲು’ಕಲಾವಿದ’ ರೆಡಿ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಪದ್ಮರಾಜ್ ಫಿಲಂಸ್ ನಿರ್ಮಿಸಿರುವ ‘ಕಲಾವಿದ’ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಪಡೆದುಕೊಂಡಿದೆ.ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಶಿವಾನಂದ್ ಹೆಚ್.ಡಿ ನಿರ್ದೇಶಿಸಿದ್ದಾರೆ. ಹನ್ನೆರಡು ವರ್ಷಗಳಿಂದ ಹಲವು ಕನ್ನಡ ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶನ ಮಾಡಿರುವ ಅನುಭವ ಇವರಿಗಿದೆ. ‘ಕಲಾವಿದ’ ಶಿವಾನಂದ್ ನಿರ್ದೇಶನದ ಮೊದಲ ಚಿತ್ರ.’ಕಲಾವಿದ’ ಚಿತ್ರದ ನಾಯಕನಾಗಿ ಪ್ರದೀಪ್ ಕುಮಾರ್ ಅಭಿನಯಿಸಿದ್ದಾರೆ. ಈ ಚಿತ್ರದ ನಿರ್ಮಾಪಕರು ಆಗಿರುವ ಪ್ರದೀಪ್ ಕುಮಾರ್ ಮೂಲತಃ ಹಾಸನ ಜಿಲ್ಲೆಯವರು. ಬಾಲ್ಯದಿಂದಲೇ ಸಿನಿಮಾದಲ್ಲಿ ನಟಿಸಬೇಕೆಂಬ ಆಸೆ ಹೊತ್ತು, ಬೆಂಗಳೂರಿಗೆ ಬಂದ ಇವರು, ಖಾಸಗಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸಿದ್ದಾರೆ.

ನಂತರ ಕೆಲವು ನಾಟಕಗಳಲ್ಲಿ ಅಭಿನಯಿಸಿ, ಒಂದು ವರ್ಷ ಕಾಲ ಕೆಲವು ನಿರ್ದೇಶಕರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ನಂತರ ಕೋರಮಂಗಲದಲ್ಲಿ ರಂಗ್ ದೇ ಬಸಂತಿ ಎಂಬ ಹೋಟೆಲ್ ಆರಂಭಿಸಿ, ಅದರಿಂದ ಬಂದ ಹಣದಿಂದ ಈ ಸಿನಿಮಾ ನಿರ್ಮಿಸಿರುವುದಾಗಿ ಪ್ರದೀಪ್ ಕುಮಾರ್ ತಿಳಿಸಿದ್ದಾರೆ. ಧಾರಾವಾಹಿ ಮೂಲಕ ನಟನೆ ಆರಂಭಿಸಿ, ರಣರಣಕ ಸಿನಿಮಾದಲ್ಲಿ ನಟಿಸಿದ್ದ ಸಂಭ್ರಮ ಈ ಚಿತ್ರದ ನಾಯಕಿ.

ಮಂಜುನಾಥ್ ಹೆಗ್ಡೆ, ಅರುಣಾ ಬಾಲರಾಜ್, ಮೂ ಗು ಸುರೇಶ್, ವರ್ಷ ಮಲ್ಲೇಶ್, ಗೀತಾ( ಗುಂಡಮ್ಮ) ಶ್ರೀಧರ್, ಜಗದೀಶ್, ಲೋಕೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿದಾನಂದ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ – ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ವೆಂಕಿ ಯು ಡಿ ವಿ ಸಂಕಲನ ಹಾಗೂ ಆರ್ಯ ರೋಷನ್ ನೃತ್ಯ ನಿರ್ದೇಶನವಿದೆ.ರೋರಿಂಗ್ ಸ್ಟಾರ್ ಶ್ರೀಮುರುಳಿ ಇತ್ತೀಚೆಗೆ ‘ಕಲಾವಿದ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಚಿತ್ರ ಉತ್ತಮವಾಗಿ ಮೂಡಿಬಂದಿರುವುದಾಗಿ ತಿಳಿಸಿರುವ ಪ್ರದೀಪ್ ಕುಮಾರ್, ಸರ್ಕಾರ ಅನುಮತಿ ನೀಡಿದ ಕೂಡಲೆ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ‘ಕಲಾವಿದ’ನ ಆಗಮನವಾಗಲಿದೆ ಎಂದಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter