ಉಪಚುನಾವಣೆ : ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ

Share on facebook
Share on twitter
Share on linkedin
Share on whatsapp
Share on email

KarnatakaPosted at: Dec 3 2019 9:13AM

ಬೆಂಗಳೂರು,:ಇದೇ ಗುರುವಾರ ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಮುಕ್ತಾಯವಾಗಲಿದೆ.

ರಾಜ್ಯದ ಬಿಜೆಪಿ ಸರ್ಕಾರಕ್ಕೆ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಸರ್ಕಾರದ ಅಳಿವು – ಉಳಿವು ಹೆಚ್ಚಾಗಿ ಫಲಿತಾಂಶದ ಮೇಲೆಯೇ ಅವಲಂಬಿತವಾಗಿದೆ.

ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳಾಗಲಿದೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ದಟ್ಟವಾಗಿ ಹರಿದಾಡುತ್ತಿರುವಾಗಲೇ ಫಲಿತಾಂಶವೂ ಸಹ ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.

ಡಿ 5 ರ ಚುನಾವಣೆಗಾಗಿ ಆಯೋಗ, ಸಕಲ ಸಿದ್ಧತೆ ಮಾಡಿಕೊಂಡಿದ್ದು 42,500 ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ. ಒಟ್ಟಾರೆ 15 ಕ್ಷೇತ್ರಗಳಲ್ಲಿ ಒಂಭತ್ತು ಮಹಿಳಾ ಅಭ್ಯರ್ಥಿಗಳು ಸೇರಿದಂತೆ 165 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

4,185 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಮಂಗಳವಾರ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು ಕ್ಷೇತ್ರಕ್ಕೆ ಸಂಬಂಧಪಡದವರು ಕ್ಷೇತ್ರವನ್ನು ಬಿಟ್ಟು ಹೋಗಬೇಕಿದೆ.

ಜೆಡಿಎಸ್ ನ ಮೂವರು ಮತ್ತು ಕಾಂಗ್ರೆಸ್ ನ ಹನ್ನೆರಡು ಶಾಸಕರನ್ನು ಹಿಂದಿನ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅನರ್ಹಗೊಳಿಸಿದ್ದು ಇದನ್ನು ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದಿತ್ತಾದರೂ, ಅನರ್ಹಗೊಂಡ ಶಾಸಕರಿಗೆ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಮಾಡಿಕೊಟ್ಟಿತ್ತು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter