ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ:ಚರ್ಚೆ

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ: ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ  ಮಾಡುವುದಕ್ಕೆ ಸಂಬಂಧಿಸಿದಂತೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್‍ಸಿಂಗ್ ಅವರು ಮೂಲ ಸೌಲಭ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಕಪಿಲ್ ಮೋಹನ್ ಅವರೊಂದಿಗೆ ಶುಕ್ರವಾರ ಚರ್ಚೆ ನಡೆಸಿದರು.


ಬೆಂಗಳೂರಿನ ವಿಕಾಸಸೌಧದಲ್ಲಿರುವ ಸಚಿವರ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಖನಿಜ ನಿಧಿ ಅನುದಾನÀ, ಕಲ್ಯಾಣ ಕರ್ನಾಟಕ ಅನುದಾನ, ಶಾಸಕರ ಅನುದಾನ ಹಾಗೂ ಮೂಲಸೌಕರ್ಯ ಇಲಾಖೆಯ ಅನುದಾನ ಬಳಸಿಕೊಂಡು ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರೊಂದಿಗೆ ಸಚಿವ ಆನಂದಸಿಂಗ್ ಅವರು ಸುಧೀರ್ಘ ಚರ್ಚೆ ನಡೆಸಿದರು.


ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕರಾದ ಬಿ.ನಾಗೇಂದ್ರ ಅವರು ಸಲಹೆ ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಹಾಗೂ ರಾಬಕೋ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರ್‍ರೆಡ್ಡಿ ಸೇರಿದಂತೆ ಇತರರು ಇದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter