ಕಾರು -ಸರ್ಕಾರಿ ಬಸ್ಸು ಡಿಕ್ಕಿ: ಮೂವರ ಸಾವು

ಕಾರು -ಸರ್ಕಾರಿ ಬಸ್ಸು ಡಿಕ್ಕಿ: ಮೂವರ ಸಾವು

ಧಾರವಾಡ : ಕಾರು ಮತ್ತು ಸರ್ಕಾರಿ ಬಸ್ಸು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ-ಗದಗ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಅಣ್ಣಿಗೇರಿ ತಾಲೂಕಿನ ಭದ್ರಾಪೂರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕೆಎಸ್‍ಆರ್‍ಟಿಸಿ ಬಸ್ಸು ಉರುಳಿ ಬಿದ್ದಿದೆ.

ಕಾರು ಆಂಧ್ರಪ್ರದೇಶದ ಮೂಲದ್ದಾಗಿದ್ದು, ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಆಂಬ್ಯೂಲೆನ್ಸ್ ಮೂಲಕ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.