ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಪ್ರತಿಭಟನೆ

Share on facebook
Share on twitter
Share on linkedin
Share on whatsapp
Share on email

ಬೆಳಗಾಯಿತು ವಾರ್ತೆ

ರಾಯಚೂರು : ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕೆಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿತು.

ರಾಜ್ಯದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಬೇಕೆಂದು ಆಗ್ರಹಿಸಿ ಕಳೆದ ಮೂರು ವರ್ಷಗಳಲ್ಲಿ ಉಗ್ರ ಹೋರಾಟ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೂ ಸರಕಾರ ಮದ್ಯ ಮರಾಟ ನಿಷೇಧಿಸಲು ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹದಿ ಹರಯದ ಯುವಕರು ಮದ್ಯ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ರಾಜ್ಯದ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ.

ಎಲ್ಲ ಜಾತಿಯವರನ್ನೊಳಗೊಂಡ ಶೇ.75ರಷ್ಟು ಮಹಿಳೆಯರು ಇರುವ ಏಳು ಸದಸ್ಯರನ್ನು ಒಳಗೊಂಡ ಸಾಮಾಜಿಕ ನ್ಯಾಯ ಸಮಿತಿಯನ್ನು ಪ್ರತಿ ಗ್ರಾಮಗಳಲ್ಲಿ ರಚಿಸಬೇಕೆಂದು ಒತ್ತಾಯಿಸಿದರು.

ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿದ್ಯಾ ಪಾಟೀಲ್, ಗುರುರಾಜ್, ಮೋಕ್ಷಮ್ಮ, ವಿರುಪಮ್ಮ, ರೇಣುಕಾ, ಬಸವರಾಜ್, ರಾಮವ್ವ, ರೇಣುಕಾ, ಪಲ್ಲವಿ, ಗೋವಿಂದು, ಪ್ರಸಾದ್, ಲಕ್ಷ್ಮಣಗೌಡ ಕಡ್ಗಂದೊಡ್ಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಸಂವಿಧಾನದ ಅನುಚ್ಛೇದ 47ರ ಆದೇಶದ ಪ್ರಕಾರ ನಿಷೇಧ

ಸಂವಿಧಾನ ಅನುಚ್ಛೇದ 47ರಲ್ಲಿ ರಾಜ್ಯಗಳಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಆದರೂ ಸರಕಾರ ಮದ್ಯ ವ್ಯಸನಕ್ಕೆ ಜನರನ್ನು ಬಲಿಯಾಗಿಸಲು ಮುಂದಾಗಿರುವುದು ಖಂಡನೀಯ. ಕಳೆದ ಎಂಟು ವರ್ಷಗಳಲ್ಲಿ ಅಬಕಾರಿ ಇಲಾಖೆಯ ಆದಾಯ 9 ಸಾವಿರ ಕೋಟಿಯಿಂದ 20 ಸಾವಿರ ಕೋಟಿಗೆ ಏರಿರುವುದೇ ಇದಕ್ಕೆ ನಿದರ್ಶನವಾಗಿದೆ

(ಪೋಟೊ : 02ಆರ್‍ಸಿಆರ್03)

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter