ಕೇಂದ್ರ ಸರ್ಕಾರದ ನೆರೆ ಪರಿಹಾರ ವಿಳಂಬ: ಕ್ಷಮೆಯಾಚಿಸಿದ ಶ್ರೀರಾಮುಲು

ಕೇಂದ್ರ ಸರ್ಕಾರದ ನೆರೆ ಪರಿಹಾರ ವಿಳಂಬ: ಕ್ಷಮೆಯಾಚಿಸಿದ ಶ್ರೀರಾಮುಲು


ಚಿತ್ರದುರ್ಗ : ಕೇಂದ್ರ ಸರ್ಕಾರ ನೆರೆ ಪರಿಹಾರ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಬಹಿರಂಗ ಕ್ಷಮೆಯಾಚಿಸಿದ್ದಾರೆ.

ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ, ನೆರೆ ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ನಷ್ಟವನ್ನು ಅಂದಾಜು ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಅಂದಾಜು 3,500 ಕೋಟಿ ರೂ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೆ. ಈಗಾಗಲೇ ಅನುದಾನ ಮಂಜೂರಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಅನುದಾನ ಬಿಡುಗಡೆಯಲ್ಲಿ ವಿಳಂಬವಾಗುತ್ತಿರುವುದರಿಂದ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದರು .

ನೆರೆ ಪರಿಹಾರ ಕಾರ್ಯದಲ್ಲಿ ಯಾರೂ ರಾಜಕಾರಣ ಮಾಡಬಾರದು. ಪಕ್ಷಾತೀತವಾಗಿ ಎಲ್ಲರೂ ಸೇರಿ ಕೇಂದ್ರಕ್ಕೆ ನಿಯೋಗ ಹೋಗೋಣ. ರಾಜಕೀಯ ಮಾಡುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಲ್ಲಿಸಲಿ. ಎಲ್ಲ ಪಕ್ಷದ ನಿಯೋಗವನ್ನು ಕೇಂದ್ರಕ್ಕೆ ಕರೆದೊಯ್ಯಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.