ತಾಕತ್ತಿದ್ದರೆ ಚುನಾವಣೆ ಎದುರಿಸಿ: ಸಿದ್ದರಾಮಯ್ಯಗೆ ಯಡಿಯೂರಪ್ಪ ಸವಾಲು

ತಾಕತ್ತಿದ್ದರೆ ಚುನಾವಣೆ ಎದುರಿಸಿ: ಸಿದ್ದರಾಮಯ್ಯಗೆ ಯಡಿಯೂರಪ್ಪ ಸವಾಲು

ಬೆಂಗಳೂರು :ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನಿಜಕ್ಕೂ ತಾಕತ್ತಿದ್ದರೆ ಉಪಚುನಾವಣೆ ಎದುರಿಸಿ ಗೆದ್ದು ತೋರಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯರೇ ಕಾರಣ. ಧರ್ಮಸ್ಥಳದಶಾಂತಿವನದದಲ್ಲಿ ಮೈತ್ರಿ ಸರ್ಕಾರ ಪತನಗೊಳಿಸುವ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧ ಇಲ್ಲ. ಅವರು ಯಾವ ಪಕ್ಷ ಸೇರುತ್ತಾರೆ ಎಂಬುದು ಗೊತ್ತಿಲ್ಲ. ಉಪಚುನಾವಣೆಗೆ ಅವರ ಸ್ಪರ್ಧೆ ಬಗ್ಗೆಯೂ ತಮಗೆ ತಿಳಿದಿಲ್ಲ ಎಂದರು

ರಾಜೀನಾಮೆ ಕೊಟ್ಟಿರುವ ಶಾಸಕರ ಜೊತೆ ಸಿದ್ದರಾಮಯ್ಯರೇ ಮಾತನಾಡಿದ್ದರು. ಆಡಿಯೋದಲ್ಲಿ ತಮ್ಮ ಹೇಳಿಕೆಗಳನ್ನು ತಿರುಚಲಾಗಿದೆ. ಸುಪ್ರೀಂಕೋರ್ಟ್ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ತಮಗಿದೆ ಎಂದರು.

ಆಡಿಯೋ ರೆಕಾರ್ಡ್ ಮಾಡಿದವರು ಯಾರು ಎನ್ನುವ ಪ್ರಶ್ನೆಗೆ ಉತ್ತರಿಸದ ಯಡಿಯೂರಪ್ಪ, ಹುಬ್ಬಳ್ಳಿಯ ಸಭೆಯಲ್ಲಿ ನಡೆದ ಚರ್ಚೆಯೇ ಬೇರೆ. ಆಡಿಯೋ ಮಾಡಿದವರು ಯಾರು ಎನ್ನುವ ಪ್ರಶ್ನೆಯೇ ಇಲ್ಲಿ ಉದ್ಬವಿಸಲ್ಲ. ಆದರೆ ಈ ವಿಚಾರದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ. ಮೈತ್ರಿ ಸರ್ಕಾರ ಕೆಡವಿದ್ದೇ ಸಿದ್ದರಾಮಯ್ಯ. ಶಾಂತಿವನದಲ್ಲಿ ಕೂತು‌ ಮಾತನಾಡಿ ಮೈತ್ರಿ ಸರ್ಕಾರ ಬೀಳಿಸಿ, ಈಗ ಬಿಜೆಪಿಯ ಮೇಲೆ ಆರೋಪ ಮಾಡುವುದಯ ಎಷ್ಟರ ಮಟ್ಟಿಗೆ ಸರಿ? ಎಂದು ಕಿಡಿಕಾರಿದರು.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.