ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂಗೆ ಸುಪ್ರೀಂ ಜಾಮೀನು

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂಗೆ ಸುಪ್ರೀಂ ಜಾಮೀನು


ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಐಎನ್‌ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ಇಬ್ಬರು ಸ್ಯೂರಿಟಿಯೊಂದಿಗೆ 2 ಲಕ್ಷ ರೂ. ಬಾಂಡ್‌ ಆಧಾರದ ಮೇಲೆ ಕಾಂಗ್ರೆಸ್‌ನ ಹಿರಿಯ ನಾಯಕನಿಗೆ ನ್ಯಾಯಮೂರ್ತಿ ಆರ್.ಬಾನುಮತಿ ನೇತೃತ್ವದ ಪೀಠ ಜಾಮೀನು ನೀಡಿದೆ.

ಚಿದಂಬರಂ ಅವರ ಆರೋಪಗಳಿಗೆ ಸಂಬಂಧಿಸಿ ದೆಹಲಿ ಹೈಕೋರ್ಟ್‌ ಅನ್ನು ಸುಪ್ರೀಂಕೋರ್ಟ್‌ ಟೀಕಿಸಿದೆ.

ನ್ಯಾಯಾಲಯದ ಅನುಮತಿಯಿಲ್ಲದೆ ಚಿದಂಬರಂ ಅವರು ದೇಶದ ಹೊರಗೆ ಪ್ರಯಾಣಿಸಬಾರದು, ಸಾರ್ವಜನಿಕ ಹೇಳಿಕೆಗಳನ್ನು ನೀಡುವುದಾಗಿ ಅಥವಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾ ಸಂದರ್ಶನಗಳನ್ನು ನೀಡುವುದಾಗಲಿ ಮಾಡಬಾರದು ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣದ ಸಾಕ್ಷಿಗಳೊಂದಿಗೆ ಚಿದಂಬರಂ ಸಂಪರ್ಕದಲ್ಲಿರಬಾರದು ಎಂದು ನ್ಯಾಯಪೀಠ ಹೇಳಿದೆ.

ಜಾರಿ ನಿರ್ದೇಶನಾಲಯ ಸೂಚಿಸಿದಾಗ ಚಿದಂಬರಂ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಸುಪ್ರೀಂಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿ ನವೆಂಬರ್ 28 ರಂದು ಆದೇಶವನ್ನು ಕಾಯ್ದಿರಿಸಿತ್ತು.
2007 ರಲ್ಲಿ ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ ಐಎನ್‌ಎಕ್ಸ್ ಮೀಡಿಯಾಕ್ಕೆ 305 ಕೋಟಿ ರೂ. ನೀಡಿದ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ (ಎಫ್‌ಐಪಿಬಿ) ಕ್ಲಿಯರೆನ್ಸ್‌ಗೆ ಸಂಬಂಧಿಸಿದ್ದಾಗಿದೆ.
ಇದರೊಂದಿಗೆ ಚಿದರಂಬರಂ ಅವರ 106 ದಿನಗಳ ಜೈಲು ವಾಸ ಕೊನೆಗೊಂಡಂತಾಗಿದೆ.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.