ಕೊರೊನಾ ಚೇತರಿಕೆ ಪ್ರಮಾಣ ಶೇಕಡಾ 84.70ಕ್ಕೆ ಏರಿಕೆ

Share on facebook
Share on twitter
Share on linkedin
Share on whatsapp
Share on email

ನವದೆಹಲಿ: ಕಳೆದ ಎರಡು ವಾರಗಳಿಂದ ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿದೆ. ಆರೋಗ್ಯ ಸಚಿವಾಲಯದ ಪರಿಣಾಮಕಾರಿ ಕ್ರಮಗಳಿಂದ ಕೊರೊನಾ ರೋಗಿಗಳ ಸಂಖ್ಯೆ 10 ಲಕ್ಷಕ್ಕಿಂತ ಕಡಿಮೆಯಾಗಿದೆ.


ಒಟ್ಟು ವರದಿಯಾದ ಪ್ರಕರಣಗಳಲ್ಲಿ ಕೇವಲ 13.75 ರಷ್ಟು ಮಾತ್ರ ರೋಗಿಗಳು ಪ್ರಸ್ತುತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಚೇತರಿಕೆ ವಿಷಯದಲ್ಲಿ ಪ್ರಗತಿ ಕಂಡಿದ್ದು ಶೇಕಡಾ 84.70ರಷ್ಟು ಚೇತರಿಕೆ ದರ ದಾಖಲಾಗಿದೆ. ಇದುವರೆಗೆ 56 ಲಕ್ಷ 62 ಸಾವಿರ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಗರಿಷ್ಠ ಸಂಖ್ಯೆಯ ಸೋಂಕಿತರು ಚೇತರಿಕೆ ಕಂಡ ದೇಶವಾಗಿ, ಭಾರತವು ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 76 ಸಾವಿರ ರೋಗಿಗಳು ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.


ಚೇತರಿಸಿಕೊಂಡ ಪ್ರಕರಣಗಳು ಮತ್ತು ಸಕ್ರಿಯ ಪ್ರಕರಣಗಳ ನಡುವಿನ ಅಂತರವು ನಿರಂತರವಾಗಿ ಹೆಚ್ಚಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಚೇತರಿಸಿಕೊಂಡ ರೋಗಿಗಳ ಸಂಖ್ಯೆಯು ಸಕ್ರಿಯ ಪ್ರಕರಣಗಳ ಸಂಖ್ಯೆಗಿಂತ ಸುಮಾರು ಆರು ಪಟ್ಟು ಹೆಚ್ಚಾಗಿದೆ. ಕಳೆದ ಒಂದು ತಿಂಗಳಲ್ಲಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾದ ರೋಗಿಗಳ ಪ್ರಮಾಣದಲ್ಲಿ ಶೇಕಡಾ 100ರಷ್ಟು ಹೆಚ್ಚಳವಾಗಿದೆ.


ಕಳೆದ 24ಗಂಟೆಗಳಲ್ಲಿ, 61 ಸಾವಿರ 267 ಹೊಸ ಪ್ರಕರಣಗಳು ವರದಿಯಾಗಿವೆ, ಇದುವರೆಗೆ ದೇಶದಲ್ಲಿ ವರದಿಯಾಗಿರುವ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 66 ಲಕ್ಷ 85 ಸಾವಿರ 83ಕ್ಕೆ ತಲುಪಿದೆ.
ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂಬತ್ತು ಲಕ್ಷದ 19 ಸಾವಿರ ಮತ್ತು 23ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 884 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಇದರೊಂದಿಗೆ ಒಟ್ಟು ಸಾವನ್ನಪ್ಪಿದವರ ಸಂಖ್ಯೆ ಒಂದು ಲಕ್ಷದ ಮೂರು ಸಾವಿರದ 569ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter