ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೋಮವಾರದಿಂದ ರಾಜ್ಯಾದ್ಯಂತ 305 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭವಾಗಿದೆ.

1,29,957 ವಿದ್ಯಾರ್ಥಿಗಳು ಮತ್ತು 82,677 ವಿದ್ಯಾರ್ಥಿನಿಯರು ಸೇರಿ ಒಟ್ಟು 2,12,652 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 37 ವಿಷಯಗಳಿಗೆ ಸೆಪ್ಟಂಬರ್ 19ರವರೆಗೆ ಪರೀಕ್ಷೆ ನಡೆಯಲಿದೆ.

ಮೊದಲ ದಿನ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2.15ರಿಂದ ಸಂಜೆ 5.30ರವರೆಗೆ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್, ಗೃಹ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿವೆ.

ಕಲಾ ವಿಭಾಗದಲ್ಲಿ 90,615, ವಾಣಿಜ್ಯ ವಿಭಾಗಕ್ಕೆ 74,476 ಹಾಗೂ ವಿಜ್ಞಾನ ವಿಭಾಗದಲ್ಲಿ 47,561 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter