ಸಿಬಿಐ ದಾಳಿ ರಾಜಕೀಯ ದುರುದ್ಧೇಶಪೂರಿತವಾದದ್ದು

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮೇಲೆ ನಡೆದಿರುವ ಸಿಬಿಐ ದಾಳಿ ರಾಜಕೀಯ ದುರುದ್ಧೇಶಪೂರಿತವಾದದ್ದು ಎಂದು ಮಾಜಿ ಸಂಸದ ಕೆಪಿಸಿಸಿ ವಕ್ತಾರ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ.

ಬುಧವಾರ ನಗರದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್‌ರವರ ವಿರುದ್ಧ ಕೇಂದ್ರ ಸರ್ಕಾರವು ಪದೇ ಪದೇ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ದಾಳಿಮಾಡಿಸುತ್ತಲೇ ಇವೆ. ಬಹಳಷ್ಟು ನಾಯಕರ ಮೇಲೂ ಆರೋಪಗಳಿವೆ. ಎಲ್ಲ ಪಕ್ಷದ ನಾಯಕರ ಆಸ್ತಿ ತನಿಖೆಗೆ ಒಳಪಡಿಸಲು ಸರ್ಕಾರ ತಕ್ಷಣ ಕ್ರಮ ವಹಿಸಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮೊಹಮ್ಮದ್ ರಫೀಕ್, ಮುಖಂಡರಾದ ಕಲ್ಕುಂಬ ಪಂಪಾಪತಿ, ಅಸುಂಡಿ ನಾಗರಾಜ, ನಂದ ಕಿಶೋರ್, ವಿಲ್ಸನ್ ಮತ್ತಿತರರು ಉಪಸ್ಥಿತರಿದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter