ರಾಜ್ಯದಲ್ಲಿ ಬರೋಬ್ಬರಿ 45 ಜನರಲ್ಲಿ ಕೊರೋನಾ ಸೋಂಕು

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಿದೆ ಎಂದು ನಿಟ್ಟುಸಿರು ಬಿಡುವಾಗಲೇ ಏಕಾಏಕಿ 45 ಹೊಸ ಪ್ರಕರಣಗಳು ವರದಿಯಾಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ಬೆಂಗಳೂರು ನಗರದ 7 ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, ಬೆಳಗಾವಿಯಲ್ಲಿ 11 ಪ್ರಕರಣಗಳು ವರದಿಯಾಗಿವೆ. ದಾವಣಗೆರೆಯಲ್ಲಿ ಬರೋಬ್ಬರಿ 14 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಉತ್ತರ ಕನ್ನಡದ ಭಟ್ಕಳದಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ. ಬಳ್ಳಾರಿಯಲ್ಲಿ 1 ಪ್ರಕರಣ ವರದಿಯಾಗಿದೆ.

ಇದರಲ್ಲಿ ಭಟ್ಕಳದ 5 ತಿಂಗಳ ಹೆಣ್ಣು ಮಗು, 3 ವರ್ಷದ ಬಾಲಕಿ, ದಾವಣಗೆರೆಯ 8 ವರ್ಷದ ಬಾಲಕ, 13 ವರ್ಷದ ಬಾಲಕಿ, 3 ವರ್ಷದ ಬಾಲಕಿ, 9 ವರ್ಷದ ಬಾಲಕಿ, 10 ವರ್ಷದ ಬಾಲಕನೂ ಸೇರಿದ್ದಾರೆ.

ಬೆಂಗಳೂರಿನ ಪಾದರಾಯನಪುರದ 22,19,40 ಮತ್ತು 25 ವರ್ಷದ ವ್ಯಕ್ತಿಗಳಿಗೆ ಸೋಂಕು ಪತ್ತೆಯಾಗಿದೆ. ಉಳಿದಂತೆ 23 ವರ್ಷದ ವ್ಯಕ್ತಿ, 35 ವರ್ಷದ ಮಹಿಳೆ ಮತ್ತು 34 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು,ಅದರ ಮೂಲವನ್ನು ಪತ್ತೆಹಚ್ಚಲಾಗುತ್ತಿದೆ.

ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 750ಕ್ಕೇರಿಕೆಯಾಗಿದೆ, 31 ಜನರು ಮೃತಪಟ್ಟಿದ್ದಾರೆ. 371 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter