ಕೊರೊನಾ ಹೆಚ್ಚಿರುವ ಜಿಲ್ಲೆಗಳ ಡಿಸಿ, ಸಿಇಒಗಳೊಂದಿಗೆ ಮುಖ್ಯಮಂತ್ರಿ ವೀಡಿಯೋ ಸಂವಾದ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಕೊರೊನಾ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗುರುವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಯಲಿದೆ.


ಕೊರೊನಾ ಸೋಂಕು ಹೆಚ್ಚಿರುವ ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ, ಧಾರವಾಡ, ಬೆಳಗಾವಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರಗಳ ಡಿಸಿ, ಸಿಇಒ, ಎಸ್ ಪಿ ಅವರೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಲಿದ್ದು, ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡುವ ಸಾಧ್ಯತೆ ಇದೆ.


ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ, ವಲಯ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ವಲಯ ಸಂಯೋಜಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ತಿಳಿಸಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter