ರಾಜ್ಯದಲ್ಲಿ ಸಕಾಲಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ರಾಜ್ಯದಲ್ಲಿ ಸಕಾಲಕ್ಕೆ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ದ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ರಾಜ್ಯ ಚುನಾವಣಾ ಆಯೋಗಕ್ಕೂ ತಿಳಿಸಲಾಗಿದೆ. ಕರೋನ ಹಿನ್ನಲೆಯಲ್ಲಿ ಆಯೋಗ ಚುನಾವಣೆ ನಡೆಸಲು ಯಾವಾಗ ಸೂಚಿಸಿದರೂ ಸರ್ಕಾರ ಅದಕ್ಕೆ ಸಿದ್ದ ಎಂದರು.


ಸದ್ಯ ವಿಧಾನ ಪರಿಷತ್ತಿಗೆ ನಡೆಯಲಿರುವ ಪದವೀದರ ಮತ್ತು ಶಿಕ್ಷಕರ ಕ್ಷೇತ್ರದ ನಾಲ್ಕು ಕ್ಷೇತ್ರದ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿ. ಇದರಿಂದ ವಿಧಾನ ಪರಿಷತ್ತಿನಲ್ಲಿ ನಮ್ಮ ಬಲ ಹೆಚ್ಚಾಗಲಿದೆ ಎಂದರು.
ಸಧ್ಯ ವಿಧಾನಪರಿಷತ್ತಿನಲ್ಲಿ ಒಟ್ಟು 75 ಸದಸ್ಯರ ಪೈಕಿ 27 ಬಿಜೆಪಿ ಸದಸ್ಯರಿದ್ದಾರೆ. ಬರುವ ಫಲಿತಾಂಶಗಳ ಸಂಖ್ಯೆ 31 ಕ್ಕೆ ಏರಲಿದೆಂದರು.
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶಿಲ್ ಜಿ. ನಮೋಷಿ ಅವರು ಅಭ್ಯರ್ಥಿಯಾಗಿದ್ದಾರೆ ಎಂದರು .


ಕಳೆದ ಬಾರಿ ಅವರು ಅಲ್ಪಮತಗಳಿಂದ ಸೋಲುಕಂಡಿದ್ದರು. ಈ ಹಿಂದೆ ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದ ಅನುಭವ ಇದೆ. ಉತ್ತಮವಾದ ಈ ಅಭ್ಯರ್ಥಿಯನ್ನು ಈ ಬಾರಿ ಮತದಾರರು ಆಯ್ಕೆ ಮಾಡಲಿದ್ದಾರೆ. ಕಾರಣ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದು ಅಭ್ಯರ್ಥಿಗಳ ಆಯ್ಕೆಗೆ ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter