ಜ.11,12 ರಂದು ಹಂಪಿ ಉತ್ಸವ

Share on facebook
Share on twitter
Share on linkedin
Share on whatsapp
Share on email

ಬೆಳಗಾಯಿತು ವಾರ್ತೆ
ಬಳ್ಳಾರಿ: ಜ.11 ಮತ್ತು 12 ರಂದು ಹಂಪಿ ಉತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಎಸ್.ಎಸ್. ನಕುಲ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.
ಉತ್ಸವಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ 5 ಕೋಟಿ ಮತ್ತು ಪ್ರವಾಸದ್ಯೋಮ ಇಲಾಖೆಗೆ 4 ಕೋಟಿ ಅನುದಾನ ಮಂಜೂರು ಮಾಡಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಒಟ್ಟು 4 ವೇದಿಕೆಗಳನ್ನು ಏರ್ಪಡಿಸಲಾಗುತ್ತದೆ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು. ವಿವಿಧ ಕಲಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಕಲಾವಿದರು ತಮ್ಮ ಸೇವಾ ವಿವರವನ್ನು ದಾಖಲೆಗಳ ಸಮೇತವಾಗಿ ಡಿ.10 ರೊಳಗಾಗಿ ಬಳ್ಳಾರಿಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಅರ್ಜಿಗಳನ್ನು ಕಳುಹಿಸಬಹುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾದ ಸಿ.ಕೆ. ಬಾಬಾ ಅವರು ಮಾತನಾಡಿ, ಹಂಪಿ ಉತ್ಸವದ ಭದ್ರತೆಗಾಗಿ 2500 ಕ್ಕೂ ಹೆಚ್ಚು ಜನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು, ಟ್ರಾಫಿಕ್ ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೇ ನೋಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter