ಗ್ರಾಪಂ ಮಟ್ಟದಲ್ಲಿ ತಂಬಾಕು ನಿಯಂತ್ರಣ ಸಮಿತಿ ಅನುಷ್ಠಾನಕ್ಕೆ ಸೂಚನೆ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಗ್ರಾಮ ಪಂಚಾಯತ್ ಮಟ್ಟದಲ್ಲಿ ತಂಬಾಕು ನಿಯಂತ್ರಣ ಕುರಿತು ಟಾಸ್ಕ್ ಫೋರ್ಸ್ ಸಮಿತಿ ರಚಿಸಿ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗುವಂತೆ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋಕಾನ್ಫರೆನ್ಸ್ ಸಭಾಗಂಣದಲ್ಲಿ ಬುಧವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಶಾಲಾ-ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು-ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಬೇಕು ಮತ್ತು ಈ ಕುರಿತು ಗೋಡೆಬರಹ ಹಾಗೂ ನಾಮಫಲಕ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೊಟ್ಟೂರು,ಹರಪನಳ್ಳಿ ತಾಲೂಕುಗಳ ವ್ಯಾಪ್ತಿಯಲ್ಲಿ ತಂಬಾಕು ಬೆಳೆ ಬೆಳೆಯಲಾಗುತ್ತಿದ್ದು, ಈ ಬೆಳೆ ಬೆಳೆಯುತ್ತಿರುವ ರೈತರಿಗೆ ತಂಬಾಕು ದುಷ್ಪರಿಣಾಮಗಳ ಬಗ್ಗೆ ತಿಳಿಸಿ ಬೆರೆ ಬೆಳೆಯುವ ಬಗ್ಗೆ ಮನವೋಲಿಸುವ ಕೆಲಸ ಮಾಡುವಂತೆ ಸೂಚನೆ ನೀಡಿದ ಎಡಿಸಿ ಮಂಜುನಾಥ ಅವರು ಉತ್ಪಾದಕರ ಹೆಸರಿರದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳುವುದರ ಜತೆಗೆ ದಂಡ ಹಾಕುವ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಪರವಾನಿಗೆ ಹೊಂದಿರುವ ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕಡ್ಡಾಯವಾಗಿ ಸ್ಮೋಕ್‍ಝೋನ್ ಮಾಡಬೇಕು ಮತ್ತು ಧೂಮಪಾನ ರಹಿತ ಪ್ರದೇಶವೆಂದು ಘೋಷಿಸುವ ಕುರಿತು ಅಗತ್ಯಕ್ರಮಕೈಗೊಳ್ಳಬೇಕು ಎಂದು ಸೂಚಿಸಿದ ಅವರು ಅಂಗಡಿಗಳಿಗೆ ಲೈಸನ್ಸ್ ನೀಡುವ ಸಂದರ್ಭದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಮತ್ತು 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ನೀಡದಿರುವ ಕುರಿತ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸೂಚಿಸಬೇಕು ಎಂದರು.
ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ನಿಷೇಧಕ್ಕೆ ಸಂಬಂಧಿಸಿದ ಸೆಕ್ಷನ್ 4 ಅಡಿ ಫಲಕಗಳನ್ನು ಹಾಕಬೇಕು ಎಂದರು.
ವಿವಿಧ ವಿಷಯಗಳ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ.ಉಪಕಾರ್ಯದರ್ಶಿಗಳಾದ ಶರಣಪ್ಪ, ಡಿಎಚ್‍ಒ ಎಚ್. ಎಲ್.ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ, ಡಿಎಸ್‍ಒ.ಡಾ. ಮರಿಯಂಬಿ ವಿ.ಕೆ., ಡಿಟಿಒ ಡಾ. ಇಂದ್ರಾಣಿ, ಜಿಲ್ಲಾ ಅಂಕೀತ ಮತ್ತು ಆಹಾರ ಸುರಕ್ಷಿತಾ ಅಧಿಕಾರಿಗಳಾದ ಡಾ.ರುದ್ರಗೌಡ ಪಾಟೀಲ್, ಡಿಎಚ್‍ಇಒ ಈಶ್ವರ್ ದಾಸಪ್ಪನವರ್, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ.ಹನುಮಂತಪ್ಪ, ದಂತ ತಜ್ಞರಾದ ಡಾ. ಪ್ರಶಾಂತ್, ಬೋಜರಾಜ್, ಎನ್‍ಸಿಡಿ

ಕನ್ಸ್‍ಲ್ಟೆಂಟ್ ಡಾ.ಜಮೀನ್ ತಾಜ್, ಮೌನೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜ್, ಕಾರ್ಮಿಕ ನಿರೀಕ್ಷರ ಅಧಿಕಾರಿಗಳು ಸೇರಿದಂತೆ ಇನ್ನೀತರರು ಇದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter