ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ ಪರಿಶಿಷ್ಟ ವರ್ಗಗಳ ಅರಣ್ಯ ಆಧಾರಿತ ಆದಿವಾಸಿ ಮತ್ತು ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಬುಡಕಟ್ಟು ಜನಾಂಗದವರ ಆರ್ಥಿಕ ಅಭಿವೃದ್ಧಿಗಾಗಿ 2020-21ನೇ ಸಾಲಿನ ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ, ನೇರಸಾಲ ಯೋಜನೆ, ಪ್ರೇರಣಾ (ಮೈಕ್ರೋಕ್ರೆಡಿಟ್) ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು. ಆನ್‍ಲೈನ್‍ನಲ್ಲಿ ಅರ್ಜಿಯನ್ನು ಪಡೆದು ಅರ್ಜಿಯೊಂದಿಗೆ ಪಾಸ್‍ಪೋರ್ಟ್ ಅಳತೆಯ 02 ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಕುಟುಂಬದ ವಾರ್ಷಿಕ ವರಮಾನ ಪತ್ರ, ಪಡಿತರ ಚೀಟಿಯ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್ ಜೆರಾಕ್ಸ್ ಪ್ರತಿ, ಅರ್ಜಿದಾರರು ಹೊಂದಿರುವ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್‍ಬುಕ್‍ನ ಮೊದಲ ಪುಟದ ಜೆರಾಕ್ಸ್ ಪ್ರತಿಯೊಂದಿಗೆ  ಆ.31ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗೆ ನಗರದ ಕಾಟೋಂನ್ಮೆಂಟ್ ತಿಲಕ್‍ನಗರದಲ್ಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಅಥವಾ ನಿಗಮದ ದೂ.ಸಂ.08392-245551ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter