ಖಾಸಗಿ ಬಸ್ ನಲ್ಲಿ ಬೆಂಕಿ, ಐವರ ಸಜೀವ ದಹನ

Share on facebook
Share on twitter
Share on linkedin
Share on whatsapp
Share on email

ಚಿತ್ರದುರ್ಗ: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಮಗು ಸೇರಿದಂತೆ ಐವರು ಸಜೀವ ದಹನವಾದ ದಾರುಣ ಘಟನೆ ಚಿತ್ರದುರ್ಗದ ಬಳಿ ಜರುಗಿದೆ.


ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ -4ರಲ್ಲಿ ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ.
ಖಾಸಗಿ ಬಸ್ ವಿಜಯಪುರದ ನಂದಗುಡಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆಎನ್ನಲಾಗಿದೆ.


ಬಸ್ಸಿನಲ್ಲಿ 35 ಪ್ರಯಾಣಿಕರು ಇದ್ದರು. ಅದರಲ್ಲಿ ಮಗು ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆ. ಗಾಯಗೊಂಡಿರುವ ಇತರೆ 30 ಜನರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.


ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಸುದ್ದಿ ತಿಳಿದ ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.ಸ್ಥಳಕ್ಕೆ ಹಿರಿಯೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter