ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

Share on facebook
Share on twitter
Share on linkedin
Share on whatsapp
Share on email

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ದಕ್ಷಿಣ ಭಾರತದ ಹಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ದಕ್ಷಿಣ ಒಳನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇಂದ್ರ ಮಹಾರಾಷ್ಟ್ರ, ವಿದರ್ಭ ಮತ್ತು ದಕ್ಷಿಣ ಒಡಿಶಾ ಭಾಗದಲ್ಲಿ ಮಳೆಯಾಗುವ ಸಂಭವವಿದೆ.


ನೈಋತ್ಯ ಮುಂಗಾರು ದೇಶದ ಹಲವೆಡೆ ಮುಂದುವರಿದಿದ್ದು, ಮುಂಗಾರು ಮಾರುತ ಮತ್ತಷ್ಟು ಕಾಲ ವಿಸ್ತರಣೆಯಾಗುವ ನಿರೀಕ್ಷೆಯಿದೆ. ಇದರಿಂದಾಗಿ ಮಳೆ ಪ್ರಮಾಣ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಮುಂದಿನ ೨೪ ಗಂಟೆಗಳಲ್ಲಿ ಇದು ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದಿಂದಾಗಿ ಉತ್ತರ ಆಂಧ್ರಪ್ರದೇಶದಲ್ಲಿ ಮಳೆಯಾಗಲಿದೆ. ಅದರಲ್ಲೂ ನಿರ್ದಿಷ್ಟವಾಗಿ ಕರಾವಳಿಯ ನರಸಾಪುರ ಮತ್ತು ವಿಶಾಖಪಟ್ಟಣಂ ಮಧ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಬುಧವಾರದವರೆಗೆ ವಿದರ್ಭ, ಮಹಾರಾಷ್ಟ್ರದ ಮಧ್ಯ ಭಾಗ, ಮರಾಠವಾಡ, ಕೊಂಕಣ್ ಮತ್ತು ಗೋವಾ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರಗೊಳ್ಳಲಿದೆ.
ಭಾರೀ ಮಳೆಯಿಂದಾಗಿ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ರಾಯಚೂರು, ಕಲಬುರಗಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter