ಚುನಾಯಿತರಾದ 48 ತಾಸಿನೊಳಗೆ ಅಭ್ಯರ್ಥಿಗಳ ಅಪರಾಧ ಹಿನ್ನಲೆ ಪ್ರಕಟಿಸುವಂತೆ ಸುಪ್ರೀಂಕೋರ್ಟ್ ಸೂಚನೆ

ಚುನಾಯಿತರಾದ 48 ತಾಸಿನೊಳಗೆ ಅಭ್ಯರ್ಥಿಗಳ ಅಪರಾಧ ಹಿನ್ನಲೆ ಪ್ರಕಟಿಸುವಂತೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ, :ವಿಧಾನಸಭೆ ಮತ್ತು ಸಂಸತ್ ಚುನಾವಣೆಗಳಲ್ಲಿ ಚುನಾಯಿತರಾಗುವ ಅಭ್ಯರ್ಥಿಗಳ ಅಪರಾಧ ಹಿನ್ನೆಲೆ ದಾಖಲೆಗಳನ್ನು ಅಭ್ಯರ್ಥಿ ಆಯ್ಕೆಯಾದ 48 ಗಂಟೆಯೊಳಗೆ ಪ್ರಕಟಿಸುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.

ಅಪರಾಧ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರಣಗಳೇನು ಎಂಬ ವಿವರಗಳನ್ನು ರಾಜಕೀಯ ಪಕ್ಷಗಳು ತಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ನ್ಯಾಯಮೂರ್ತಿ ಫಾಲಿ ನಾರಿಮನ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿದೆ.

ಈ ಕುರಿತು ವಕೀಲರಾದ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿ, ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅಪರಾಧ ಪೂರ್ವಾಪರಗಳನ್ನು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿ ಸರ್ವೋಚ್ಛ ನ್ಯಾಯಾಲಯ 2018 ರ ಸೆಪ್ಟೆಂಬರ್ ನಲ್ಲಿ ನೀಡಿದ್ದ ತೀರ್ಪಿನ ನಿರ್ದೇಶನಗಳನ್ನು ರಾಜಕೀಯ ಪಕ್ಷಗಳು ಪಾಲಿಸುತ್ತಿಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.