ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ

Share on facebook
Share on twitter
Share on linkedin
Share on whatsapp
Share on email


ಬೆಳಗಾಯಿತು ವಾರ್ತೆ
ಬಳ್ಳಾರಿ:ಅಪಾಯದ ಅಂಚಿನಲ್ಲಿರುವ, ಸಂಕಷ್ಟದಲ್ಲಿರುವ ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಿ, ಅವರಿಗೆ ಪರಿಸರ ಸ್ನೇಹಿ ವಾತಾವರಣ ನಿರ್ಮಾಣ ಮಾಡುವುದೇ ಮಕ್ಕಳ ಸಹಾಯವಾಣಿಯ ಪ್ರಮುಖ ಉದ್ದೇಶವಾಗಿದೆ ಎಂದು ಬಿಡಿಡಿಎಸ್ ಸಂಸ್ಥೆಯ ಸಂಯೋಜಕರಾದ ಪುಷ್ಪಾರಾಜ ಅವರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರದಂದು ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನ.14 ರಿಂದ ನ. 20 ರವರೆಗೆ ಚೈಲ್ಡ್‍ಲೈನ್ ಸೇ ದೋಸ್ತಿ ಮತ್ತು ಮಕ್ಕಳ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ನಗರದ ರೇಡಿಯೋ ಪಾರ್ಕ್ ಬಳಿ ಇರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಸಂಸ್ಥೆಯು ಕೂಡ್ಲಿಗಿ, ಹೊಸಪೇಟೆ, ಬಳ್ಳಾರಿ ಮತ್ತು ಸಂಗನಕಲ್ಲು ಗ್ರಾಮದಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಪುಷ್ಪಾರಾಜ ತಿಳಿಸಿದರು.

ಕಳೆದ ಏಪ್ರಿಲ್ 2019 ರಿಂದ ಅಕ್ಟೋಬರ್ 2019 ರವೆರೆಗೆ ಜಿಲ್ಲೆಯಾದ್ಯಂತ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಒಟ್ಟು 783 ಪ್ರಕರಣಗಳಿಗೆ ಸ್ಪಂದಿಸಲಾಗಿದೆ. ಲೈಂಗಿಕ ದೌಜನ್ಯಕ್ಕೆ ಸಂಬಂಧಿಸಿದಂತೆ ಹೊಸಪೇಟೆಯಲ್ಲಿ ಒಟ್ಟು 15 ಪ್ರಕರಣಗಳು ದಾಖಲಾಗಿದ್ದು, 12 ಜನರಿಗೆ ಶಿಕ್ಷೆಯಾಗಿದೆ. ಬಾಲ ಕಾರ್ಮಿಕ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಶೋಷಣೆಗೆ ಒಳಗಾದ ಮಕ್ಕಳನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸುತ್ತೇವೆ. ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಮಾಹಿತಿಯನ್ನು ಮಕ್ಕಳ ಪೋಷಕರಾಗಲೀ ಇಲ್ಲವೇ ಅವರ ಸುತ್ತಮುತ್ತಲಿನವರು ತಿಳಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಡಿಡಿಎಸ್ ಸಂಸ್ಥೆಯ ನಿರ್ದೇಶಕರಾದ ಫಾ. ಯಾಗಪ್ಪ, ಸ್ನೇಹಾ ಸಂಸ್ಥೆಯ ಡಿ.ರುದ್ರಪ್ಪ, ಚಿದಾನಂದ ಮತ್ತಿತ್ತರರು ಇದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter