ಹಂಪಿಗೆ ಒಂದು ವಾರ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಕರೊನಾ ವೈರಸ್ ಭೀತಿಗೆ ಭಯಪಡಬೇಡಿ, ಬರೀ ಕೆಮ್ಮು ನೆಗಡಿ ಕಾಣಿಸಿಕೊಂಡರೆ ಅದು ರೋಗ ಬಂದಂತೆ ಅಲ್ಲ ಅದಕ್ಕೆ ಯಾರು ಭಯ ಬೀಳುವ ಅವಶ್ಯಕತೆಯಿಲ್ಲ ಸಂಭಾವಿತ ಕರೊನಾ ವೈರಸ್ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾ ಆರೋಗ್ಯ ಇಲಾಖೆಯು ಸಕಲ ಸಿದ್ದತೆಯನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸೋಂಕು ಪೀಡಿತರ ಸಂಪರ್ಕದಿಂದ ದೂರವಿರಬೇಕು. ಶಂಕಿತ ರೋಗಿಯು ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಮತ್ತು ಟ್ರಿಪಲ್ ಲೇಯರ್ ಮಾಸ್ಕ್ ಬಳಸಬೇಕು. ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ ಅಥವಾ ಕರವಸ್ತ್ರ ಉಪಯೋಗಿಸಬೇಕು. ಸೋಂಕಿತ ದೇಶಗಳಿಗೆ ಮತ್ತು ತುರ್ತು ಅಗತ್ಯವಿಲ್ಲದ ಪ್ರಯಾಣಗಳಿಗೆ ರದ್ದುಗೊಳಿಸಿ ಎಂದು ಅವರು ಹೇಳಿದರು.

ಮಾ.15 ಬೆಳಿಗ್ಗೆ 6 ರಿಂದ ಮಾ.22ರ ಬೆಳಗ್ಗೆ 6ರವರೆಗೆ ಒಂದು ವಾರಗಳ ಕಾಲ ಹಂಪಿಯಲ್ಲಿ ಯಾವುದೇ ಪ್ರವಾಸಿಗರಿಗೆ ಪ್ರವೇಶವಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಭಾನುವಾರದಿಂದ ಸಿನಿಮಾ ಮಂದಿರಗಳು ಒಂದು ವಾರಗಳ ಕಾಲ ಬಂದ್ ಮಾಡಲು ಸೂಚಿಸಲಾಗಿದೆ. ಮಾಲ್‍ಗಳು, ನಾಟಕ ಪ್ರದರ್ಶನಗಳು,ರಂಗಮಂದಿರಗಳು, ಪಬ್‍ಗಳು, ನೈಟ್ ಕ್ಲಬ್‍ಗಳು, ಕ್ರೀಡಾಂಗಣಗಳು, ಸ್ವಿಮ್ಮಿಂಗ್ ಪೂಲ್ಸ್, ಜಿಮ್ ಹಾಗೂ ಹೆಚ್ಚಾಗಿ ಜನರು ಸೇರುವಂತಹ , ಧಾರ್ಮಿಕ ಕಾರ್ಯಕ್ರಮಗಳು, ಹಾಗೂ ಜಾತ್ರೆಗಳಿಗೆ ಅದಷ್ಟು ಕಡಿಮೆ ಸಂಖ್ಯೆಯಲ್ಲಿ ಜನರು ಸೇರುವಂತೆ ನೋಡಿಕೊಳ್ಳಬೇಕು ಎಂದರು.

ಈ ರೋಗಕ್ಕೆ ಸಂಬಂಧಿಸಿದಂತೆ ಯಾವುದೆ ಸಂದೇಹವಿದ್ದಲಿ ರಾಜ್ಯದ ದೂ.ಸಂ.104 ಹಾಗೂ ಜಿಲ್ಲೆಯಲ್ಲಿ ದೂ.ಸಂ.08392-277100ಗೆ ಮಾಹಿತಿಗಳನ್ನು ದಿನದ 24/7 ಗಂಟೆಯವರೆಗೂ ಪಡೆಯಬಹುದು ಎಂದರು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ಪಿ ಸಿ.ಕೆ.ಬಾಬಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜನಾರ್ಧನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ ಮತ್ತಿತ್ತರು ಇದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter