ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಆಗಸ್ಟ್ 15 ರಂದು ಹೊಸಪೇಟೆ ಹಾಗೂ ಬಳ್ಳಾರಿ ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


      ಆಗಸ್ಟ್ 15 ರಂದು ಬೆಳಗ್ಗೆ 6 ಕ್ಕೆ ಹೊಸಪೇಟೆಯ ರೋಟರಿ ವೃತ್ತದಲ್ಲಿ ನೂತನವಾಗಿ ನಿರ್ಮಿಸಲಾದ 150 ಅಡಿ ಎತ್ತರದ ಬೃಹತ್ ಧ್ವಜಸ್ತಂಭಕ್ಕೆ ಧ್ಜಜಾರೋಹಣ ಮಾಡಲಿದ್ದಾರೆ. ನಂತರ ಸಚಿವರು ಹೊಸಪೇಟೆಯಿಂದ ನಿರ್ಗಮಿಸಿ ಬೆಳಗ್ಗೆ 8 ಕ್ಕೆ ಬಳ್ಳಾರಿ ಆಗಮಿಸಲಿದ್ದಾರೆ.


 ಬಳ್ಳಾರಿಯಲ್ಲಿ ಸಚಿವರು 8.15ಕ್ಕೆ ನಗರದ ಹೆಚ್.ಆರ್. ಗವಿಯಪ್ಪ ವೃತ್ತದಲ್ಲಿ 150 ಅಡಿ ಎತ್ತರದ ಬೃಹತ್ ಧ್ವಜಸ್ತಂಭದಲ್ಲಿ ರಾಷ್ಟçಧ್ವಜವನ್ನು ನೆರವೇರಿಸಲಿದ್ದಾರೆ. ನಂತರ ವೈದ್ಯಕೀಯ ಕಾಲೇಜು ಮುಂಭಾಗದಲ್ಲಿರುವ ಪೂಜ್ಯ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಲಿದ್ದಾರೆ.


      ಸಚಿವರು ಬೆಳಗ್ಗೆ 9 ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತದ 74ನೇ ಸ್ವಾತಂತ್ರೋತ್ಸವದ ರಾಷ್ಟçಧ್ಜಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಗ್ಗೆ 10.30ಕ್ಕೆ ನಿಗರ್ಮಿಸಿ ಹೊಸಪೇಟೆಗೆ ತೆರಳಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter