ಗೋವಾ ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟನೆ

ಗೋವಾ ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟನೆ

ಬೆಳಗಾಯಿತು ವಾರ್ತೆ

ಹುಬ್ಬಳ್ಳಿ: ಮಹದಾಯಿ ಕಳಸಾ ಬಂಡೂರಿ ನೀರನ ವಿಚಾರವಾಗಿ ಗೋವಾ ಮುಖ್ಯಮಂತ್ರಿಯ ಧೋರಣೆಯನ್ನು ಖಂಡಿಸಿ ಮಹದಾಯಿ ಕಳಸಾ ಬಂಡೂರಿ ಹೋರಾಡ ಸಮನ್ವಯ ಸಮಿತಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ ಕಳಸಾ ಬಂಡೂರಿ ಹೋರಾಟಗಾರ ಅಮೃತ ಇಜಾರೆ ಮಾತನಾಡಿ, ಮಹದಾಯಿ ಕಳಸಾ ಬಂಡೂರಿ ವಿಚಾರವಾಗಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ತಿರ್ಮಾಣಿಸಿದ್ದಾಗ ಸೌಹಾರ್ದಯುತ ಮಾತುಕತೆಗೆ ಒಪ್ಪಿದ ಗೋವಾ ಸಿಎಂ ನಂತರದಲ್ಲಿ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದು ಖಂಡನೀಯವಾಗಿದ್ದು, ಕೂಡಲೇ ಒಕ್ಕೂಟ ವ್ಯವಸ್ಥೆಯ ವಿರುದ್ದ ನಡೆದುಕೊಳ್ಳುವ ಮುಖ್ಯಮಂತ್ರಿಗಳ ವಿರುದ್ದ ದೇಶದ ಪ್ರಧಾನಿ ಕ್ರಮ ಕೈಗೊಳ್ಳಬೇಕು.

ಅಲ್ಲದೇ ಒಕ್ಕೂಟ ವ್ಯವಸ್ಥೆ ಉಳಿಯಲು ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಮಹದಾಯಿ ನದಿ ಸಮಸ್ಯೆಯನ್ನು ಬಗೆಹರಿಸಬೇಕು.

ರಾಜ್ಯ ಸರ್ಕಾರ ಕಳಸಾ – ಬಂಡೂರಿ ನಾಲಾ ಯೋಜನೆಗೆ ಬಜೆಟ್ ನಲ್ಲಿ ಹಣವನ್ನಿಟ್ಟು ಕಳಸಾ ಬಂಡೂರಿ ನಾಲಾವನ್ನು ಅಭಿವೃದ್ಧಿ ಪಡಿಸಿ ರೈತರಿಗೆ ಸಹಾಯ ಮಾಡಬೇಕು.

 ರಾಜ್ಯ ಮತ್ತು ಕೇಂದ್ರ ಸರ್ಕಾರ ಮಹದಾಯಿ ಕಳಸಾ ಬಂಡೂರಿ ವಿಚಾರವಾಗಿ ಮಲದಾಯಿದೋರಣೆಯನ್ನು ಮತ್ತೆ ಮುಂದುವರೆಸಿದರೆ ಇದೀಗ ಮತ್ತೆ ಆರಂಭವಾದ ನೀರಿನ ಹೋರಾಟ ಮುಂದಿನ ದಿನಗಳಲ್ಲಿ ತೀವ್ರಗೊಳಿಸಲಾಗುವುದು ಕೂಡಲೇ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.

          ಪ್ರತಿಭಟನೆಯಲ್ಲಿ ನೂರಾರು ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿಯ ಸದಸ್ಯರು ಇದ್ದರು.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.