ಚಿತ್ರಕಲೆ, ಶಿಲ್ಪಕಲೆಯ ಪದವಿ ಕೋರ್ಸ್ : ಅರ್ಜಿ ಆಹ್ವಾನ

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ: ಹಂಪಿಯ ಕನ್ನಡ ವಿಶ್ವ ವಿದ್ಯಾಲಯ ಬಾದಾಮಿ ಕೇಂದ್ರದಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲೆಯ 4 ವರ್ಷದ ಪದವಿ ಕೋರ್ಸ್ಗಳ ವ್ಯಾಸಂಗಕ್ಕೆ 2020-21ನೇ ಸಾಲಿಗೆ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಾದಾಮಿ ಕೇಂದ್ರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತರು ಪಿ.ಯು.ಸಿ, ಐ.ಟಿ.ಐ, ಜೆ.ಓ.ಡಿ.ಸಿ ಹಾಗೂ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ವಿಶ್ವ ವಿದ್ಯಾಲಯ ಹಂಪಿಯ ವಿಸ್ತರಣಾ ಕೇಂದ್ರವಾದ ಬಾದಾಮಿ ಬನಶಂಕರಿಯಲ್ಲಿ ನಡೆಸಲಾಗುತ್ತೀರುವ ಚಿತ್ರಕಲೆ ಹಾಗೂ ಶಿಲ್ಪಕಲೆಯ 4 ವರ್ಷದ ಪದವಿ ತರಗತಿಗಳು ಇನ್ನಿತರ ಸಾಮಾನ್ಯ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಸ್.ಡಬ್ಲೂ, ಇನ್ನಿತರ ತತ್ಸಮಾನ ಪದವಿಗಳಂತೆ ಪದವಿ ಹಂತದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು, ಬ್ಯಾಂಕಿAಗ್, ಕೆ.ಎ.ಎಸ್, ಐ.ಎ.ಎಸ್, ರೈಲ್ವೆ ಇಲಾಖೆ, ಎಫ್.ಡಿ.ಎ, ಇತರೆ ಬರೆಯಲು ಅವಕಾಶವಿರುತ್ತದೆ. ಅಲ್ಲದೆ ಉನ್ನತ ವ್ಯಾಸಂಗ ಮಾಡಬಯಸುವವರಿಗೆ ಎಂ.ವಿ.ಎ, ಎಂ.ಎಫ್.ಎ, ಎಂ.ಫಿಲ್, ಪಿ.ಹೆಚ್.ಡಿ, ಮತ್ತು ಬೇರೆ ಕ್ಷೇತ್ರಗಳಾದ ಪತ್ರಿಕೋದ್ಯಮ, ಬಿ.ಪಿ.ಎಡ್ ಮುಂತಾದವುಗಳನ್ನು ಕಲಿಯಲು ಅವಕಾಶವಿರುತ್ತದೆ.


ಬಾದಾಮಿ ಕೇಂದ್ರದಲ್ಲಿ ನಿರಂತರವಾಗಿ ಪ್ರಖ್ಯಾತ ಕಲಾವಿದರು ಹಾಗೂ ಸೃಜನಶೀಲ ಯುವ ಕಲಾವಿದರಿಂದ ಕಲಾಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು. ರಾಷ್ಟç ಹಾಗೂ ರಾಜ್ಯ ಮಟ್ಟದ ಕಲಾ ಶಿಬಿರ, ಕಾರ್ಯಗಾರ, ಕಲಾ ಪ್ರದರ್ಶನಗಳು ನಿರಂತರವಾಗಿ ನಡೆಯುತ್ತಿದ್ದು, ಕೇಂದ್ರವು ನಾಡೋಜ ಡಾ.ಆರ್.ಎಂ ಹಡಪದ ಅವರ ಹೆಸರಿನಲ್ಲಿ ಚಿತ್ರಕಲೆ ಹಾಗೂ ಶಿಲ್ಪಕಲೆಯ ಸುಸಜ್ಜಿತ ಆರ್ಟ್ ಗ್ಯಾಲರಿಯನ್ನು ಹೊಂದಿರುತ್ತದೆ. ಇಲ್ಲಿ ನಮ್ಮ ಸಂಪ್ರದಾಯ ಶಿಲ್ಪ ಮತ್ತು ಚಿತ್ರಗಳನ್ನು ಸಂಗ್ರಹಿಸಿ ಪ್ರದರ್ಶನ ಹಾಗೂ ಅಧ್ಯಯನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
      ಹೆಚ್ಚಿನ ಮಾಹಿತಿಗೆ ಹಂಪಿಯ ಕನ್ನಡ ವಿಶ್ವ ವಿದ್ಯಾಲಯ ಬಾದಾಮಿ ಕೇಂದ್ರದ ದೂ.ಸಂ.9449256814, 9448580056, 9886664967ಗೆ ಸಂಪರ್ಕಿಸಬಹದು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter