ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ: ಜಿಲ್ಲಾಡಳಿತ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಇದೇ ಸೆ.17 ರಂದು ಗುರುವಾರ ಬೆಳಗ್ಗೆ 9ಕ್ಕೆ  ಸರ್ಕಾರಿ ಪದವಿ ಪೂರ್ವ (ಮಾ.ಪು) ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


      ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಧ್ವಜಾರೋಹಣವನ್ನು ನೆರೆವೇರಿಸಲಿದ್ದಾರೆ. ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಸಂಸದರಾದ ವೈ.ದೇವೇಂದ್ರಪ್ಪ, ಜಿ.ಎಂ.ಸಿದ್ದೇಶ್ವರ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ನಾಗೇಂದ್ರ, ಪಿ.ಟಿ.ಪರಮೇಶ್ವರ ನಾಯ್ಕ, ಎನ್.ವೈ.ಗೋಪಾಲಕೃಷ್ಣ, ಭೀಮಾನಾಯ್ಕ.ಎಲ್.ಬಿ.ಪಿ, ಜಿ.ಕರುಣಾಕರರೆಡ್ಡಿ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಎಂ.ಎA.ಸೋಮಲಿAಗಪ್ಪ, ಜೆ.ಎನ್.ಗಣೇಶ್, ಎಸ್.ವಿ.ರಾಮಚಂದ್ರ, ಡಾ.ಚಂದ್ರಶೇಖರ್.ಬಿ.ಪಾಟೀಲ್, ತಾಪಂ ಅಧ್ಯಕ್ಷೆ ಎಸ್.ಆರ್.ಲೀಲಾವತಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ ಅದಾವತ್ ಮತ್ತು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter