ಕಾರ್ಮಿಕ ದಿನಾಚರಣೆ ಅಂಗವಾಗಿ ಅಭಿನಂದನೆ

Share on facebook
Share on twitter
Share on linkedin
Share on whatsapp
Share on email

ಹುಬ್ಬಳ್ಳಿ: ಕೊರೋನಾ ವೈರಸ್ ಭೀತಿಯಿಂದ ಲಾಕ್ ಡೌನ್ ಘೋಷಣೆಯಾಗಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಕಾರ್ಮಿಕ ದಿನಾಚರಣೆ ಅಂಗವಾಗಿ ನಾಗರಾಜ ಗೌರಿ ಹಾಗೂ ದೀಪಾ ಗೌರಿ ದಂಪತಿಗಳು ದಿನಸಿ ಕಿಟ್ ವಿತರಣೆ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.


ಬಳಿಕ ಜಂಟಿಯಾಗಿ ಮಾತನಾಡಿದ ಗೌರಿ ದಂಪತಿಗಳು,ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಪೌರಕಾರ್ಮಿಕರ ಶ್ರಮ ನಿಜಕ್ಕೂ ಶ್ಲಾಘನೀಯವಾಗಿದ್ದು,ಇಂತಹ ಸಮಯದಲ್ಲಿಯೂ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವುದು ವಿಶೇಷವಾಗಿದೆ ಎಂದರು.

ಲಾಕ್ ಡೌನ್ ಸಂದರ್ಭದಲ್ಲಿ ಹು-ಧಾ ಮಹಾನಗರದ ಸ್ವಚ್ಚತೆಗೆ ಕಂಕಣಬದ್ಧರಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಅಭಿನಂದನೆ ಸಲ್ಲಿಸುವ ಸದುದ್ದೇಶದಿಂದ ಈ ಕಾರ್ಯವನ್ನು ಕೈಗೊಳ್ಳಲಾಗಿದೆ.ಕರ್ತವ್ಯನಿರತತೆಯಲ್ಲಿ ಪೌರಕಾರ್ಮಿಕರಿಗೆ ಇಂದು ಕಾರ್ಮಿಕರ ದಿನಾಚರಣೆ ಎಂಬುವುದನ್ನು ಕೂಡ ಲೆಕ್ಕಿಸದೆ ಕಾರ್ಯನಿರ್ವಹಿಸುತ್ತಿದ್ದಾರೆ ಅವರ ಕಾರ್ಯ ಇನ್ನಷ್ಟು ವ್ಯಾಪಿಸಲಿ ಎಂದು ಶುಭ ಹಾರೈಸಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter