ಕುಡಿಯುವ ನೀರಿನ ಘಟಕದಲ್ಲಿ ಅವ್ಯವಸ್ಥೆ: ಸಚಿವ ಗರಂ

Share on facebook
Share on twitter
Share on linkedin
Share on whatsapp
Share on email

ಹಾವೇರಿ: ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸ್ವಚ್ಛತೆ ಇಲ್ಲದ್ದನ್ನು ಕಂಡ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಹಾವೇರಿಯ ಸ್ವ ಕ್ಷೇತ್ರ ಹಿರೇಕೆರೂರಿನಲ್ಲಿ ನಡೆದಿದೆ.

ಇಂದು ಹಿರೇಕೆರೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ 2019- 20 ನೇ ಸಾಲಿನ 5,045 ಯೋಜನೆಯಡಿ ಚನ್ನಳ್ಳಿ ಗ್ರಾಮದಿಂದ ದೂದಿಹಳ್ಳಿ ಗ್ರಾಮದ ವರೆಗೆ ರಸ್ತೆ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಚನ್ನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಪರಿಶೀಲಿಸಿದರು. ಘಟಕದಲ್ಲಿ ಸರಿಯಾಗಿ ಕುಡಿಯುವ ನೀರು ಬರದಿರುವುದನ್ನು ಹಾಗೂ ಸುತ್ತಮುತ್ತ ಅಸ್ವಚ್ಛತೆ ಕಂಡು ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು.
ಜನರಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಸರ್ಕಾರ ಕಲ್ಪಿಸಿದೆ. ಸರ್ಕಾರದ ಸೌಲಭ್ಯದಲ್ಲಿ ತೊಂದರೆ ಕಂಡು ಬಂದಲ್ಲಿ ಅಥವಾ ಸಾರ್ವಜನಿಕರಿಂದ ದೂರು ಕೇಳಿಬಂದಲ್ಲಿ ಅಧಿಕಾರಿಗಳು ಅದರತ್ತ ಗಮನಹರಿಸಿ ಸರಿಪಡಿಸಲು ಮುಂದಾಗಬೇಕು ಎಂದರು.

ಚನ್ನಹಳ್ಳಿ ಗ್ರಾಮ ಹಿರೇಕೆರೂರಿನಿಂದ 2 ಕಿ.ಮೀ.ದೂರವಿದೆ ಎಂದು ಇಓ ಶ್ರೀನಿವಾಸ ಹಾಗೂ ಪಿಡಿಓ ಸಬೂಬು ಹೇಳಿದರು. ಆಗ ಸಚಿವರು, ಇರುವ 2 ಕಿ.ಮೀ.ದೂರದಲ್ಲಿ ಅಧಿಕಾರಿಗಳು ಓಡಾಡುವುದಿಲ್ಲ ಎಂದರೇನು ಅರ್ಥ? ಎಂದು ಹರಿಹಾಯ್ದರು.
ಆದಷ್ಟು ಬೇಗ ಸಮಸ್ಯೆ ಸರಿಪಡಿಸದಿದ್ದಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ಬಿ.ಸಿ.ಪಾಟೀಲ್ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್, ಬಿಜೆಪಿಯ ಮುಖಂಡರು ಹಾಗೂ ಗ್ರಾಮ ಪಂಚಾಯತಿಯ ಸದಸ್ಯರು ಹಾಜರಿದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter