ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ


ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಸಂಪುಟದ ಸಚಿವರುಗಳಿಗೆ ಕೊನೆಗೂ ಅಳೆದು ಸುರಿದೂ ಜಿಲ್ಲೆಗಳ ಉಸ್ತುವಾರಿ ವಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಬಹುತೇಕ ಸಚಿವರು ಕೋರಿದ್ದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಉಸ್ತುವಾರಿ ವಹಿಸಿ ತಮ್ಮ ಹಿಡಿತ ಸಾಧಿಸಿದ್ದಾರೆ.

ಭಾರಿ ಚರ್ಚೆಗೆ ಕಾರಣವಾಗಿದ್ದ ರಾಜಧಾನಿ ಬೆಂಗಳೂರು ನಗರ ಉಸ್ತುವಾರಿ ಪಡೆಯಲು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಮತ್ತು ಆರ್.ಅಶೋಕ್ ಅವರು ಇನ್ನಿಲ್ಲದ ಪ್ರಯತ್ನ ನಡೆಸಿದ್ದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು ನಗರ ಉಸ್ತುವಾರಿಯನ್ನು ತಾವೇ ಉಳಿಸಿಕೊಂಡು 17 ಸಚಿವರ ಪೈಕಿ ಕೆಲವರಿಗೆ ಎರಡು ಜಿಲ್ಲೆಗಳು, ಕೆಲವರಿಗೆ ಒಂದು ಜಿಲ್ಲೆಗಳ ಜವಾಬ್ದಾರಿ ನೀಡಿದ್ದಾರೆ. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಬಾಗಲಕೋಟೆ ಹಾಗೂ ಹೆಚ್ಚುವರಿಯಾಗಿ ಕಲಬುರಗಿ ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ.

ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ್ ಅವರಿಗೆ ರಾಮನಗರ,ಹೆಚ್ಚುವರಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆ, ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ಬಳ್ಳಾರಿ,ಹೆಚ್ಚುವರಿಯಾಗಿ ಕೊಪ್ಪಳವನ್ನು ವಹಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಶಿವಮೊಗ್ಗ ,ಹೆಚ್ಚುವರಿಯಾಗಿ ದಾವಣಗೆರೆ ಜಿಲ್ಲೆ ನೀಡಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಬೆಂಗಳೂರು ಗ್ರಾಮಾಂತರಜಿಲ್ಲೆ, ಹೆಚ್ಚುವರಿಯಾಗಿ ಮಂಡ್ಯ ಜಿಲ್ಲೆ ಹಂಚಿಕೆ ಮಾಡಲಾಗಿದೆ. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಜೊತೆಗೆ ಹೆಚ್ಚುವರಿಯಾಗಿ ಹುಬ್ಬಳ್ಳಿ-ಧಾರವಾಡ ಜಿಲ್ಲೆ ನೀಡಲಾಗಿದೆ.ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ರಾಯಚೂರು ಹಾಗೂ ಹೆಚ್ಚುವರಿಯಾಗಿ ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಚಾಮರಾಜ ನಗರ ಜಿಲ್ಲೆ ಉಸ್ತುವಾರಿ ವಹಿಸಲಾಗಿದೆ.

ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಮೈಸೂರಿನ ಜೊತೆಗೆ ಮಡಿಕೇರಿಯನ್ನು ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಗೆ ಚಿಕ್ಕಮಗಳೂರು ಉಸ್ತುವಾರಿ ನೀಡಿದ್ದು,ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಉಡುಪಿ ಜೊತೆಗೆ ಹಾವೇರಿ ಜಿಲ್ಲೆಯನ್ನೂ ಹೆಚ್ಚುವರಿಯಾಗಿ ನೀಡಲಾಗಿದೆ.
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ದಕ್ಷಿಣ ಜಿಲ್ಲೆ ಉಸ್ತುವಾರಿ ನೀಡಲಾಗಿದ್ದು,ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿಗೆ ತುಮಕೂರು ಹಾಗೂ ಹೆಚ್ಚುವರಿಯಾಗಿ ಹಾಸನ ಜಿಲ್ಲೆಯನ್ನು ನೀಡಲಾಗಿದೆ.ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಗೆ ಗದಗ ಜೊತೆಗೆ ಹೆಚ್ಚುವರಿಯಾಗಿ ವಿಜಯಪುರ ಜಿಲ್ಲಾ ಉಸ್ತುವಾರಿ ವಹಿಸಲಾಗಿದೆ.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.