ಸ್ವಚ್ಛ ಸೇವಾ ಕಾರ್ಯದಲ್ಲಿ ಪಾಲ್ಗೊಂಡ ಸಚಿವ ಶ್ರೀರಾಮುಲು

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನ್ಮದಿನದ ನಿಮಿತ್ತ ನಗರದ ವಿಮ್ಸ್ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸ್ವಚ್ಛ ಸೇವಾ ಸಪ್ತಾಹ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಪಾಲ್ಗೊಂಡು ಪೊರಕೆ ಹಿಡಿದು ಕಸಗೂಡಿಸುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.

ಪೊರಕೆ ಹಿಡಿದು ಕಸಗೂಡಿಸುವ ಈ ಸ್ವಚ್ಚತಾ ಸೇವಾದಲ್ಲಿ ಸಂಸದ ವೈ.ದೇವೇಂದ್ರಪ್ಪ , ಮಾಜಿ ಸಂಸದ ಸಣ್ಣ ಫಕೀರಪ್ಪ, ಮಾಜಿ ಶಾಸಕ ಸುರೇಶಬಾಬು, ವಿಮ್ಸ್ ನಿರ್ದೇಶಕ ಎಲ್.ಎನ್.ರೆಡ್ಡಿ ಪಾಲ್ಗೊಂಡು ಸ್ವಚ್ಚಗೊಳಿಸಿದರು.

ನಂತರ ಮಾತನಾಡಿದ ಸಚಿವ ಬಿ.ಶ್ರೀರಾಮುಲು ಅವರು, ಪ್ರಧಾನ ಮಂತ್ರಿಗಳ ಜನ್ಮದಿನಾಚರಣೆ ನಿಮಿತ್ತ ಸೆ.14ರಿಂದ 21ರವರೆಗೆ ದೇಶದಾದ್ಯಂತ ಸ್ವಚ್ಚತಾ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಇಡೀ ಜೀವನವನ್ನೇ ದೇಶಕ್ಕಾಗಿ ಮೀಸಲಿಟ್ಟಿರುವ ಪ್ರಧಾನ ಮಂತ್ರಿಗಳು ನೂರಾರು ವರ್ಷಗಳ ಕಾಲ ಸುಖವಾಗಿರಲಿ ಎಂದರು

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter