ಬಳ್ಳಾರಿ ಭಾಗದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಅವಕಾಶ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ : ಬಳ್ಳಾರಿ ಭಾಗದಲ್ಲಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಅವಕಾಶವೊಂದು ಲಭಿಸಿದ್ದು, ಅದನ್ನು ಸಮರ್ಪಕವಾಗಿ ನಿಭಾಯಿಸುವೆ. ಈ ಮೂಲಕ ಇಲ್ಲಿನ ಜನರ ಪ್ರೀತಿ ವಿಶ್ವಾಸ ಗಳಿಸಲು ಯತ್ನಿಸುವುದಾಗಿ ಉಪಮುಖ್ಯಮಂತ್ರಿಗಳು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ‌ಸವದಿ ಅವರು ಹೇಳಿದರು.

ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿರುವ ಗೋಶಾಲೆಗಳನ್ನು ಬಂದ್ ಮಾಡುವುದಿಲ್ಲ; ಅವುಗಳನ್ನು ಮುಂದುವರೆಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಮೋಟಾರು ವಾಹನ ಕಾಯ್ದೆ(ತಿದ್ದುಪಡಿ) ಅನ್ವಯ ನಿಯಮ ಉಲ್ಲಂಘಿಸಿದವರಿಗೆ ವಿಧಿಸಲಾಗುವ ದಂಡಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ದಂಡಗಳನ್ನು (ನಾಳೆ)ಬುಧವಾರ ಸಂಜೆಯೊಳಗೆ ಅಂತಿಮಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter