ರಸ್ತೆ ಅಪಘಾತದಲ್ಲಿ 11 ಮಂದಿ ಸಾವು

Share on facebook
Share on twitter
Share on linkedin
Share on whatsapp
Share on email

ವಡೋದರ: ಗುಜರಾತ್‌ನ ಈ ಜಿಲ್ಲೆಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಮಿನಿ ಟ್ರಕ್ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಇತರ 16 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ವಾಘೋಡಿಯಾ ವೃತ್ತದಲ್ಲಿ ಮಿನಿ ಟ್ರಕ್ ಹಿಂಭಾಗಕ್ಕೆ ಮತ್ತೊಂದು ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.


ನತದೃಷ್ಟರು ಸೂರತ್ ನಗರದವರಾಗಿದ್ದು, ಅಪಘಾತ ಸಂಭವಿಸಿದಾಗ ಪಂಚಮಹಲ್ ಜಿಲ್ಲೆಯತ್ತ ಸಾಗುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಆರ್ ಬಿ ಬ್ರಹ್ಮಭಟ್ ಹೇಳಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲೆಂದು ಅವರು ಪ್ರಾರ್ಥಿಸಿರುವ ನರೇಂದ್ರಮೋದಿ, ಅಪಘಾತ ಸಂಭವಿಸಿದ ಸ್ಥಳದಲ್ಲಿ ಆಡಳಿತ ಎಲ್ಲ ಅಗತ್ಯ ನೆರವು ಒದಗಿಸುತ್ತಿದೆ ಎಂದು ಹೇಳಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter