ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ತೀರ್ಮಾನ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ದೆಹಲಿಯ ವರಿಷ್ಠರ ಜೊತೆ ಚರ್ಚಿಸಿದ್ದು, ಸದ್ಯದಲ್ಲಿಯೇ ಅವರು ಸಚಿವರ ಪಟ್ಟಿಯನ್ನು ಕಳುಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಹೊಯ್ಸಳ ಕ್ಯಾಬ್ ಸೇವೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ದೆಹಲಿಗೆ ಹೋಗಿ ಚರ್ಚಿಸಿ, ಸಚಿವರ ಪಟ್ಟಿಯನ್ನು ನೀಡಿದ್ದೇನೆ. ವರಿಷ್ಠರು ಪರಿಶೀಲಿಸಿ ಎಲ್ಲವನ್ನು ಪರಿಹರಿಸಿ, ಇನ್ನೆರಡು ಮೂರು ದಿನಗಳಲ್ಲಿ ಕಳುಹಿಸಿ ಕೊಡುತ್ತಾರೆ. ಆ ನಂತರ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದು ತೀರ್ಮಾನವಾಗುತ್ತದೆ. ದೆಹಲಿಯ ವರಿಷ್ಠರು ಹೇಳಿದಂತೆ ತೀರ್ಮಾನ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter