ಮತ್ತೆ ಅಂಗಳಕ್ಕಿಳಿದ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೋಚ್ ರವಿಶಾಸ್ತ್ರಿ

Share on facebook
Share on twitter
Share on linkedin
Share on whatsapp
Share on email

ನವದೆಹಲಿ: ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರವಿ ಶಾಸ್ತ್ರಿ ಮತ್ತೊಮ್ಮೆ ಅಂಗಳಕ್ಕಿಳಿದ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಮಾರ್ಚ್ ಬಳಿಕ ಲಾಕ್‍ಡೌನ್ ಹಿನ್ನೆಲೆಯಲ್ಲಿ ರವಿ ಶಾಸ್ತ್ರಿ ಅಂಗಳಕ್ಕಿಳಿದಿರಲಿಲ್ಲ. ಆಟಗಾರರು ಐಪಿಎಲ್‍ನಲ್ಲಿ ಪಾಲ್ಗೊಂಡಿದ್ದರಾದರೂ ಕೋಚ್ ಅದರ ಭಾಗವಾಗಿಲ್ಲದ ಕಾರಣ ಆಸಿಸ್ ವಿರುದ್ಧದ ಸರಣಿಯ ಮೂಲಕ ಮತ್ತೆ ಶಾಸ್ತ್ರಿ ಸ್ಪರ್ಧಾತ್ಮಕತೆಗೆ ಮರಳುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ತರಬೇತಿಯ ಸಂದರ್ಭದ ಚಿತ್ರಗಳನ್ನು ರವಿ ಶಾಸ್ತ್ರಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಟೀಮ್ ಇಂಡಿಯಾ ಆಟಗಾರರು ನೆಟ್‍ನಲ್ಲಿ ತರಬೇತಿ ಪಡೆಯುತ್ತಿರುವ ಚಿತ್ರಗಳನ್ನು ರವಿ ಶಾಸ್ತ್ರಿ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಟೀಮ್ ಇಂಡಿಯಾ ಆಟಗಾರರಿಗೆ ಕ್ವಾರಂಟೈನ್ ಸಂದರ್ಭದಲ್ಲಿ ತರಬೇತಿಗಾಗಿ ವಿಶೇಷ ಸೌಲಭ್ಯವನ್ನು ಕಲ್ಪಿಸಿರುವ ಚಿತ್ರವನ್ನು ಹಂಚಿಕೊಂಡಿರುವ ರವಿ ಶಾಶ್ತ್ರಿ, ” ಮತ್ತೊಮ್ಮೆ ವ್ಯವಹಾರದಲ್ಲಿ ತೊಡ ಗಿಸಿಕೊಂಡಿರುವುದಕ್ಕೆ ಸಂತಸವಾಗುತ್ತಿದೆ,” ಎಂದು ಬರೆದುಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ, ಶಿಖರ್ ಧವನ್ ಹಾಗೂ ಶಾರ್ದೂಲ್ ಟಾಕೂರ್ ಅವರೊಂದಿಗಿನ ಫೆÇೀಟೋವನ್ನು ರವಿ ಶಾಸ್ತ್ರಿ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್ ಅಭ್ಯಾಸವನ್ನು ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದರು.ಕಳೆದ ಮಾರ್ಚ್ ಬಳಿಕ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿರುವ ಮೊದಲ ಕ್ರಿಕೆಟ್ ಸರಣಿ ಇದಾಗಿದೆ. ಆದರೆ ಬಹುತೇಕ ಕ್ರಿಕೆಟಿಗರು ಸೆಪ್ಟೆಂಬರ್- ನವೆಂಬರ್ ಅವಧಿಯಲ್ಲಿ ಐಪಿಎಲ್ ನಲ್ಲಿ ಪಾಲ್ಗೊಂಡಿದ್ದು ಅಲ್ಲಿಂದ ನೆರವಾಗಿ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter