ಬೇಡಿಕೆಗೆ ಅನುಗುಣವಾಗಿ ಸಹಾಯ ಹಸ್ತ

ಬೇಡಿಕೆಗೆ ಅನುಗುಣವಾಗಿ ಸಹಾಯ ಹಸ್ತ


ಬೆಳಗಾಯಿತು ವಾರ್ತೆ
ಬಳ್ಳಾರಿ:
ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಧನ ಸಹಾಯವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಒದಗಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಾದೇಶಿಕ ಆಯುಕ್ತರಾದ ಸುಬೋಧ್ ಯಾದವ್ ಹೇಳಿದರು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸಭಾಂಗಣದಲ್ಲಿ ಗುರುವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.


ವಿವಿ ಪ್ರಾರಂಭವಾಗಿ ಬಹುತೇಕ ಹತ್ತು ವರ್ಷ ಕಳೆದಿವೆ. ಅಂದಿನಿಂದ ಇಂದಿನವರೆಗೆ ಹಂತ-ಹಂತವಾಗಿ ವಿವಿ ಪ್ರಗತಿಯನ್ನು ಅವಲೋಕಿಸಿದಾಗ ಕೆಲವು ಮೂಲಭೂತ ಸೌಲಭ್ಯಗಳ ಕೊರತೆ ಮೇಲ್ನೋಟಕ್ಕೆ ಕಂಡು ಬಂದಿವೆ. ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮಂಡಳಿಯಿಂದ ಸಹಾಯಹಸ್ತ ನೀಡುವುದಾಗಿ ಭರವಸೆ ನೀಡಿದರು.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.