ಟೆಕ್ನಾಲಜಿಯಿಂದಲೇ ಸರ್ವ ಸಮಸ್ಯೆಗೂ ಪರಿಹಾರ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ : ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೆÇೀಷಕರಿಗೆ ಅನುಕೂಲವಾಗುವಂತೆ ತಂತ್ರಜ್ಞಾನ ಬಳಸಿಕೊಳ್ಳಬೇಕು. ಬಹುತೇಕ ಎಲ್ಲ ಸಮಸ್ಯೆಗಳಿಗೂ ಟೆಕ್ನಾಲಜಿಯೇ ಪರಿಹಾರ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು.
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮಂಗಳವಾರ ಹಮ್ಮಿಕೊಂಡಿದ್ದ ಅನ್‍ಲೈನ್ ಮೂಲಕ ಪ್ರವೇಶಾತಿ ಪಡೆಯುವ ಪ್ರಕ್ರಿಯೆಗೆ ಬೆಂಗಳೂರಿನಿಂದಲೇ ವರ್ಚುಯಲ್ ವೇದಿಕೆ ಮೂಲಕ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಆನ್‍ಲೈನ್ ಮೂಲಕವೇ ವಿದ್ಯಾರ್ಥಿಗಳು ಪ್ರವೇಶ ಪಡೆಯುವ ವ್ಯವಸ್ಥೆಯನ್ನು ಶ್ರೀ ಕೃಷ್ಣದೇವರಾಯ ವಿವಿ ರೂಪಿಸಿದೆ. ಈವರೆಗೂ ಎಲ್ಲಿಯು ಇಂಥ ವ್ಯವಸ್ಥೆ ಇರಲಿಲ್ಲ;ಪ್ರವೇಶ, ಶುಲ್ಕ ಪಾವತಿ, ಸೀಟು ಹಂಚಿಕೆ, ರೋಸ್ಟರ್ ಸೇರಿ ಎಲ್ಲ ಪ್ರಕ್ರಿಯೆಗಳು ಅನ್ ಲೈನ್ ನಲ್ಲಿಯೇ ನಡೆಯಲಿವೆ. ಇತರೆ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳೆಲ್ಲವೂ ಇದೇ ಮಾದರಿಯನ್ನು ಅನುಸರಿಸಬೇಕು ಎಂದು ಕರೆ ನೀಡಿದರು.

ಈಗಾಗಲೇ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸರಕಾರ ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಇಲಾಖೆಯಲ್ಲಿ ʼಇ-ಆಫೀಸ್ʼ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆನ್’ಲೈನ್ ಅಪ್ಲಿಯೇಷನ್ ವ್ಯವಸ್ಥೆ ಮೂಲಕ ಅನೇಕ ಸುಧಾರಣೆಗಳನ್ನು ಮಾಡಲಾಗಿದೆ. ಇಲಾಖೆಯಲ್ಲಿ ಹಿಂದೆಂದೂ ಕಾಣದಂಥ ಪಾರದರ್ಶಕತೆ ಮತ್ತು ಆಡಳಿತದಲ್ಲಿ ಜವಾಬ್ದಾರಿತನವನ್ನು ತರಲಾಗಿದೆ ಎಂದು ಅವರು ನುಡಿದರು.
ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪೆÇ್ರ.ಸಿದ್ದು ಅಲಗೂರು ಸೇರಿದಂತೆ ಹಲವರು ಆನ್‍ಲೈನ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter