ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ಮೃತಪಟ್ಟಲ್ಲಿ ಕುಟುಂಬ ಸದಸ್ಯರಿಗೆ ಪರಿಹಾರ; ಹೈಕೋಟ್

ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ಮೃತಪಟ್ಟಲ್ಲಿ ಕುಟುಂಬ ಸದಸ್ಯರಿಗೆ ಪರಿಹಾರ; ಹೈಕೋಟ್


ಬೆಳಗಾಯಿತು ವಾರ್ತೆ
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಡೆಸಲು ವೈದ್ಯರು ಲಭಿಸದೆ ಗರ್ಭಿಣಿಯರು ಸಾವನ್ನಪ್ಪಿದರೆ ಅಂತಹವರ ಕುಟುಂಬಗಳಿಗೆ ಸರ್ಕಾರವೇ ಪರಿಹಾರ ನೀಡಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ಆರೋಗ್ಯ ಇಲಾಖೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಯಾವ ಕಾಲಮಿತಿಯೊಳಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟವಾಗಿ ತಿಳಿಸಿ ಎಂದು ನ್ಯಾಯಪೀಠ ಹೇಳಿತು.

ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸನ್ನದ್ಧವಾಗಿದೆ. ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಗರ್ಭೀಣಿಯರು, ಬಾಣಂತಿಯರ ಸಾವು, ತಾಯಿ-ಶಿಶು ಮರಣ ಪ್ರಮಾಣ ಕರ್ನಾಟಕದಲ್ಲಿ ಕಡಿಮೆ ಇದೆ. ದೇಶದಲ್ಲಿ ನಮ್ಮ ರಾಜ್ಯ 11ನೇ ಸ್ಥಾನದಲ್ಲಿದೆ ಎಂದು ಸರ್ಕಾರದ ಪರ ವಕೀಲರು ವಿವರಿಸಿದರು.


ನ್ಯಾಯಪೀಠ ತೀವ್ರ ಅಸಮಾಧಾನ :
ರಾಜ್ಯದ ಜಿಲ್ಲಾ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಸೂತಿ ತಜ್ಞರು, ಮಕ್ಕಳ ವೈದ್ಯರೂ ಸೇರಿದಂತೆ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿ ಕೊರತೆಯ ಕುರಿತು ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.