ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ : ಎನ್ ಸಿ ಪಿ – ಕಾಂಗ್ರೆಸ್ ನಡುವೆ ನಿರ್ಣಾಯಕ ಮಾತುಕತೆ

ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ : ಎನ್ ಸಿ ಪಿ – ಕಾಂಗ್ರೆಸ್ ನಡುವೆ ನಿರ್ಣಾಯಕ ಮಾತುಕತೆ

ನವದೆಹಲಿ : ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಸರ್ಕಾರ ರಚನೆಯ ಸಿದ್ಧತೆ ಕುರಿತು ಕಾಂಗ್ರೆಸ್ ಮತ್ತು ಎನ್ ಸಿ ಪಿ ನಾಯಕರ ನಡುವೆ ನಿರ್ಣಾಯಕ ಮಾತುಕತೆಗಳು ಬುಧವಾರದಿಂದ ಪುನರಾರಂಭವಾಗಲಿವೆ.

ಉಭಯ ಪಕ್ಷಗಳ ನಾಯಕರ ನಡುವೆ ಮಂಗಳವಾರ ಮಹತ್ವದ ಮಾತುಕತೆ ನಡೆಯಬೇಕಿತ್ತು. ಆದರೆ ಇಂದಿರಾ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ನಾಯಕರಿಗೆ ಬಿಡುವಿಲ್ಲದ ಕಾರಣ ಮಾತುಕತೆ ನಡೆಯಲಿಲ್ಲ.

ಈಗಾಗಲೇ ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಎನ್ ಸಿ ಪಿ ನಾಯಕ ಶರದ್ ಪವಾರ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿವರಣೆ ನೀಡಿದ್ದಾರೆ.

ಕಾಂಗ್ರೆಸ್ – ಎನ್ ಸಿ ಪಿ ನಾಯಕರು, ಸಾಮಾನ್ಯ ಕನಿಷ್ಠ ಕಾರ್ಯಕ್ರಮ, ಮೂರು ಪಕ್ಷಗಳ ನಡುವೆ ಅಧಿಕಾರ ಹಂಚಿಕೆ ಸೂತ್ರ ಕುರಿತು ಮಹತ್ವದ ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಶಿವಸೇನೆಯ ಮುಖ್ಯಸ್ಥ ಉದ್ಧವ ಠಾಕ್ರೆ, ಇದೇ ಶುಕ್ರವಾರ ತಮ್ಮ ನಿವಾಸದಲ್ಲಿ ಶಾಸಕರ ಸಭೆ ಕರೆದಿರುವುದು ಮುಂದಿನ ರಾಜಕೀಯ ಬೆಳವಣಿಗೆಗಳಿಗೆ ಹಿಡಿದ ಕನ್ನಡಿಯಾಗಿದೆ.

ಸೋನಿಯಾ ಗಾಂಧಿ ಭೇಟಿ ನಂತರ, ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಸೇರಿ ಸರ್ಕಾರ ಮಾಡುವ ಬಗ್ಗೆ ಮಾತುಕತೆ ನಡೆದಿಲ್ಲ ಎಂದು ಶರದ್ ಪವಾರ್ ಹೇಳಿಕೆ ನಂತರ ಗೊಂದಲ ಉಂಟಾಗಿತ್ತು. ಬುಧವಾರ ಕಾಂಗ್ರೆಸ್ ಮತ್ತು ಎನ್ ಸಿ ಪಿ ನಾಯಕರು ನಿರ್ಣಾಯಕ ಮಾತುಕತೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.