ಕೊವಿದ್‍ ತಡೆಗಟ್ಟಲು ತಮಿಳುನಾಡು ಪ್ರಯತ್ನಗಳಿಗೆ ಶ್ಲಾಘನೆ

Share on facebook
Share on twitter
Share on linkedin
Share on whatsapp
Share on email

ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ಕೊರೊನಾವೈರಸ್ ಹರಡುವಿಕೆ ತಡೆಗೆ ತೆಗೆದುಕೊಂಡ ಪರಿಣಾಮಕಾರಿ ಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಲ್ಲಿನ ಸರ್ಕಾರವನ್ನು ಸರ್ಕಾರವನ್ನು ಅಭಿನಂದಿಸಿದ್ದಾರೆ.

ನರೇಂದ್ರಮೋದಿ ಶನಿವಾರ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಕೊವಿದ್‍-19 ಸಾಂಕ್ರಾಮಿಕ ಸೋಂಕು ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಪಳನಿಸ್ವಾಮಿ ಅವರು ಮೋದಿಯವರಿಗೆ ಧನ್ಯವಾದ ಅರ್ಪಿಸಿ, ಕರೋನವೈರಸ್ ಸೋಂಕು ನಿಭಾಯಿಸಲು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಸಮಗ್ರವಾಗಿ ವಿವರಿಸಿದ್ದಾರೆ.

ಕೇಂದ್ರ ಸರ್ಕಾರ ಸೂಚಿಸಿರುವ ಎಲ್ಲ ಒಂಬತ್ತು ಮಾರ್ಗಸೂಚಿಗಳನ್ನು ‘ಜನತಾ ಕರ್ಫ್ಯೂ’ ದಿನವಾದ ಭಾನುವಾರ ರಾಜ್ಯದಲ್ಲಿ ಅನುಸರಿಸಲಾಗುವುದು ಎಂದು ಪಳನಿಸ್ವಾಮಿ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter