ಅಪಘಾತ: ಕರ್ತವ್ಯನಿರತ ಪತ್ರಕರ್ತ ಸಾವು

Share on facebook
Share on twitter
Share on linkedin
Share on whatsapp
Share on email
ರಾಮನಗರ: ಕರ್ತವ್ಯನಿರತ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ.

ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ.

ಎಟಿಎಂ ಹಣ ಸಾಗಿಸುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಹನುಮಂತು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನು ಜಪ್ತಿ ಮಾಡಿ ಚಾಲಕನನ್ನು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter